ಬೆಂಗಳೂರು: ಮನೆಮನೆಗೆ ಕಾಂಗ್ರೆಸ್ ಅಭಿಯಾನದ ಪೋಸ್ಟರ್ ಬಿಡುಗಡೆಯನ್ನು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ರವರು ಮತ್ತು ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್ಸಷ್ಟ್ರಕ್ಷನ್ ಫಾರೆಸ್ಟ್ ಅಂಡ್ ವುಡ್ ವರ್ಕರ್ಸ್ ಫೆಡರೇಷನ್ ರಾಜ್ಯಾಧ್ಯಕ್ಷ ಜಿ.ಆರ್.ದಿನೇಶ್ ಬಿಡುಗಡೆಗೊಳಿಸಿದರು
ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಜಿ.ಆರ್.ದಿನೇಶ್ ಮಾತನಾಡಿ ಕಟ್ಟಡ ನಿರ್ಮಾಣ, ಫಾರೆಸ್ಟ್ ಮತ್ತು ಮರಗೆಲಸ ಮಾಡುವವರು ರಾಜ್ಯದಲ್ಲಿ ಲಕ್ಷಾಂತರ ಜನ ಇದ್ದಾರೆ. ಕಾಂಗ್ರೆಸ್ ಪಕ್ಷದ ಅಂಗ ಸಂಸ್ಥೆ ಐ.ಎನ್.ಬಿ.ಸಿ.ಡಬ್ಯೂ.ಎಫ್ ಶ್ರಮಿಕ ವರ್ಗದವರ ಸಂಘಟನೆ ಮಾಡಲಾಗುವುದು ಎಂದರು.
ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿಗಳು, ವಿರೋಧ ನಾಯಕ ಸಿದ್ದರಾಮಯ್ಯರವರ ಆದೇಶದ ಮೇರೆಗೆ ಮನೆಮನೆಗೆ ಕಾಂಗ್ರೆಸ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 200 ಯುನಿಟ್ ವಿದ್ಯುತ್ ಉಚಿತ ಮತ್ತು ಗೃಹಲಕ್ಷ್ಮೀ ಯೋಜನೆ ಮನೆಯ ಯಾಜಮಾನಿಗೆ 2000 ರೂಪಾಯಿ ಮತ್ತು ಪ್ರತಿ ವ್ಯಕ್ತಿಗೆ 10 ಕೆ.ಜಿ.ಅಕ್ಕಿ ಉಚಿತ ಎಂದು ಘೋಷಣೆ ಮಾಡಲಾಗಿದೆ ಎಂದರು.
ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚುನಾವಣೆ ಪೂರ್ವ ಜನತೆಗೆ ನೀಡಿದ 165 ಭರವಸೆಗಳನ್ನು ಪೂರೈಸಿದ ದೇಶದ ಮೊಟ್ಟ ಮೊದಲ ಸರ್ಕಾರವಾಗಿದೆ. ನಮ್ಮ ಸಂಘಟನೆಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭಿವೃದ್ದಿ ಕಾರ್ಯಗಳ ಮಾಹಿತಿ ನೀಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ದೇಶಕ್ಕೆ ಹಿತ ಎಂದು ಮತದಾರರಿಗೆ ಮನವರಿಕೆ ಮಾಡಲಿದ್ದೇವೆ ಎಂದು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ INBCWF ವತಿಯಿಂದ 10000 ಮನೆಗಳಿಗೆ ಪೋಸ್ಟರ್ ಪ್ರತಿಗಳನ್ನು ತಲುಪಿಸಲಾಗುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ INBCWF ಮಹತ್ವವಾದ ಹೋರಾಟ, ಸಂಘಟನೆ ಮಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಹಗಲಿರುಳು ಶ್ರಮಿಸಲಾಗುವುದು ಎಂದರು.
INBCWF ಪ್ರಧಾನ ಕಾರ್ಯದರ್ಶಿ ಕುಮಾರ್, ರಾಜ್ಯ ಉಪಾಧ್ಯಕ್ಷ ನಾಗರಾಜ್, ಮೈಸೂರು ಜಿಲ್ಲಾಧ್ಯಕ್ಷ ಪ್ರಮೋದ್ ಕುಮಾರ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಪುಟ್ಟರಾಜು, ನಗರಧ್ಯಾಕ್ಷ ಡೆರೀಕ್ ಮೆಲ್ವಿನ್ ಮೊದಲಾದವರು ಇದ್ದರು.



