ಸ್ಟ್ರಾಂಗ್ ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್
ಸಂಡೂರು ವಿಧಾನಸಭೆ ಉಪಚುನಾವಣೆ-2024
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ 2024 ರ ಅಂಗವಾಗಿ ನ.13 ರಂದು ಸುಸೂತ್ರವಾಗಿ ಶಾಂತತೆಯಿಂದ ಮತದಾನ ನಡೆದಿದ್ದು, 06 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆಯು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನ.23 ರ ಶನಿವಾರ ಬೆಳಗ್ಗೆ 08 ರಿಂದ ನಡೆಯಲಿದೆ.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಮತಯಂತ್ರಗಳನ್ನು ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಲಾಯಿತು.
ಮತಯಂತ್ರಗಳ ಸ್ಟ್ರಾಂಗ್ ರೂಂ ಬಾಗಿಲಿಗೆ ಬೀಗ ಹಾಕಿ ಮೊಹರು ಹಾಕಲಾಯಿತು, ಜೊತೆಗೆ ಬಾಗಿಲನ್ನು ದಪ್ಪ ಹಲಗೆಯ ಮೂಲಕ ಸಂಪೂರ್ಣ ಮುಚ್ಚಿ ಸೀಲ್ ಮಾಡಲಾಯಿತು.
ಮತ ಎಣಿಕೆ ಕೇಂದ್ರ ಸುತ್ತಲೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ.
ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಚುನಾವಣಾ ಸಾಮಾನ್ಯ ವೀಕ್ಷಕರಾದ ಡಾ.ದಿವ್ಯಾ ಎಸ್.ಅಯ್ಯರ್, ವೆಚ್ಚ ವೀಕ್ಷಕ ಮುರಳಿರಾವ್ ಆರ್.ಜೆ., ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಂಡೂರು ತಾಲ್ಲೂಕು ತಹಶೀಲ್ದಾರ ಅನೀಲ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಇದ್ದರು.
ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ: ಸಂಡೂರು ವಿಧಾನಸಭೆ ಕ್ಷೇತ್ರ ಉಪಚುನಾವಣೆಯ ಮತಎಣಿಕೆಯು ನ.23 ರಂದು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.




