ನ.18 ರಿಂದ 10 ದಿನಗಳ ಉದ್ಯಮಶೀಲತಾ ತರಬೇತಿ

2 years ago

#10days #entrepreneurship #training #Dharwad #Ceedoc

ಧಾರವಾಡ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವ ಪರಿಶಿಷ್ಟ ಜಾತಿಯ ಪುರುಷ ಮತ್ತು ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 18ರಂದು ರಾಯಾಪೂರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದಾರೆ.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಜಂಟಿ ನಿರ್ದೇಶಕರ ಕಛೇರಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಾಪೂರ, ಧಾರವಾಡ ದೂ.ಸಂ: 8792343840 ಸಂಪರ್ಕಿಸಬಹುದು.

Leave a Reply