ಬಳ್ಳಾರಿ: ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗದಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗ.ಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮರ್ಥ್ಯದ ಅಕ್ರಮ ಪಂಪ್ ಸೆಟ್ಗ ಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ಗಿಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿದೆ ಎಂದರು.
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ಗುಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ಗರಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ಗಿಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ಗದಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ಗ ಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.




