ಬೆಂಗಳೂರು: ರಾಜ್ಯದ ಚುನಾಯಿತ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಬಿಜೆಪಿ ಸಂಚು ರೂಪಿಸಿದೆ. ನಾಯಕರೊಬ್ಬರು ದೂರವಾಣಿ ಮೂಲಕ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಬಿಜೆಪಿ ಸೇರಲು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಮಂಡ್ಯ ಶಾಸಕ ಗಣಿಗ ರವಿ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ರೀತಿ ಸುಳ್ಳು ಆರೋಪ ಮಾಡುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕತ್ವ ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ.
ವರಿಷ್ಠರ ಸೂಚನೆ ಮೇರೆಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹುಬ್ಬಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಿಯೋಗವೊಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಶಾಸಕ ರವಿಕುಮಾರ್ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಬೇಕು. ಒಂದು ವೇಳೆ ಶಾಸಕರು ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾದರೆ ಅವರ ವಿರುದ್ಧ ಜರುಗಿಸಬೇಕೆಂದು ಆಗ್ರಹಿಸಿ ದೂರು ನೀಡಿದೆ.
ಶಾಸಕ ರವಿಕುಮಾರ್ ಅವರನ್ನು ಯಾರು? ಎಲ್ಲಿ? ಯಾವಾಗ? ಭೇಟಿ ಮಾಡಿದರು. ಅವರಿಗೆ 100 ಕೋಟಿ ರೂ. ಆಫರ್ ನೀಡಿರುವುದಕ್ಕೆ ದಾಖಲೆಯಿದೆಯೇ? ಇದ್ದರೆ ಅದನ್ನು ಏಕೆ ಬಿಡುಗಡೆ ಮಾಡಬಾರದು? ಸುಳ್ಳು ಆರೋಪ ಮಾಡಿರುವ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಹಿಂದೆಯೂ ಇದೇ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವ ಅವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಈ ಹೇಳಿಕೆಯಿಂದ ಬಿಜೆಪಿಗೆ ಸಾಕಷ್ಟು ಮುಜುಗರವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.




