ಕಲಬುರಗಿ: ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 34 ಎ.ಡಿ.ಎಲ್.ಆರ್ ನೇಮಕಾತಿ ಸಹ ನಡೆದಿದೆ. ಇದರಿಂದ ಸರ್ವೇಯರ್ ಇಲಾಖೆಗೆ ಬಲ ಬರಲಿದೆ. ಇದನ್ನು ಬಳಸಿಕೊಂಡು ಪ್ರಸ್ತುತ ಇರುವ 22 ಲಕ್ಷ ಮಲ್ಟಿ ಹೋಲ್ಡರ್ ಆರ್.ಟಿ.ಸಿ. ಗಳನ್ನು ಅವರವರಿಗೆ ಪ್ರತ್ಯೇಕವಾಗಿ ಪೋಡಿ ಮಾಡಿ ಆರ್.ಟಿ.ಸಿ. ಮಾಡಿಸಿ ಕೊಡಬೇಕಾಗಿದೆ. ಇದಕ್ಕಾಗಿ ರೋಡ್ ಮ್ಯಾಪ್ ಸಿದ್ಧಗೊಳಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಹಿನ್ನೆಲೆಯಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣಗಳು ವರದಿಯಾಗಿರುವುದು ಗಮನಕ್ಕೆ ಬಂದಿದೆ ಎಂದರು.
ಆದರೆ ಇದನ್ನು ಮೆಟ್ಟಿ ನಿಂತು ಪ್ರತಿ ಹಳ್ಳಿ, ಪಟ್ಟಣದ ಸಾರ್ವಜನಿಕರಿಗೆ ಶುದ್ಧೀಕರಿಸಿದ ಕುಡಿಯುವ ನೀರು ಪೂರೈಸುವುದು ನಮ್ಮ ಜವಾಬ್ದಾರಿ. ಮುಖ್ಯಮಂತ್ರಿಗಳು ಇತ್ತೀಚಿನ ಕಲುಷಿತ ನೀರು ಸೇವನೆ ಪ್ರಕರಣಗಳಿಂದ ತುಂಬಾ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿರಿ, ನಿಣ್ಕಾಳಜಿ ವಹಿಸಿದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಸುಶೀಲಾ ಬಿ., ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಚಂದ್ರಶೇಖರ ನಾಯಕ್, ಕೊಪ್ಪಳ ಡಿ.ಸಿ. ನಳಿನ್ ಅತುಲ್, ಬಳ್ಳಾರಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ, ಸಾಮಾಜಿಕ ಪಿಂಚಣಿ ವಿಭಾಗದ ನಿರ್ದೇಶಕ ರಂಗಪ್ಪ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಷನ್ ಎಂ.ಡಿ ವಸಂತಕುಮಾರ, ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಸೇರಿದಂತೆ ವಿಭಾಗದ ಸಹಾಯಕ ಆಯುಕ್ತರು, ತಹಶೀಲ್ದಾರರು, ಡಿ.ಡಿ.ಎಲ್.ಆರ್ ಗಳು ಹಾಜರಿದ್ದರು.




