108 ಅಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗು ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ಅಂಬ್ಯುಲೆನ್ಸ್’ಗಳು ಸರ್ಕಾರದ್ದೇ ಆದರೂ ನಿರ್ವಹಣೆ ಮಾತ್ರ ಖಾಸಗಿಯವರದ್ದಾಗಿತ್ತು. ವಾಹನಗಳ ಡಿಸೇಲ್ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಚಾಲಕರ ವೇತನವನ್ನು ಸರ್ಕಾರ ಬಿಡುಗಡೆಗೊಳಿಸಿದರೂ ಏಜೆನ್ಸಿಗಳು ಸಕಾಲಕ್ಕೆ ಪಾವತಿ ಮಾಡುತ್ತಿರಲಿಲ್ಲ. ಏಜೆನ್ಸಿಗಳು ವೇತನ ಬಿಡುಗಡೆಗೊಳಿಸಲು ಪ್ರತಿ ಬಾರಿ ಸರ್ಕಾರ ಮಧ್ಯೆ ಪ್ರವೇಶಿಸಬೇಕಾಗಿತ್ತು. ಖಾಸಗಿ ನಿರ್ವಹಣೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವೇ ಆಗುತ್ತಿತ್ತು.
ಆದರಿಂದ ಸರ್ಕಾರ ಈ ಐತಿಹಾಸಿಕ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಸಾಫ್ಟ್ವೇರ್ ಸಿದ್ಧಪಡಿಸಲಾಗಿದ್ದು ಚಾಮರಾಜನಗರದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಮುಂಬರುವ ತಿಂಗಳುಗಳಲ್ಲಿ ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆಗಳನ್ನು ಆರೋಗ್ಯ ಇಲಾಖೆಯ ನಿರ್ವಹಣಾ ವ್ಯಾಪ್ತಿಗೆ ತರಲಾಗುವುದು.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ



