ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗರದಲ್ಲಿ ವಾಸಿಸುತ್ತಿದ್ದ 11 ಮಂದಿ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ವಿದೇಶಿ ಪ್ರಜೆಗಳನ್ನು ಎಫ್ಆರ್ಆರ್ಓ ಮುಂದೆ ಹಾಜರುಪಡಿಸಲಾಗಿದೆ. ಅವರ ಆದೇಶದಂತೆ ಇವರನ್ನು ವಿದೇಶಿ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ. ದೇಶದಿಂದ ಅವರುಗಳನ್ನು ಗಡಿಪಾರು ಮಾಡುವ ಕಾನೂನು ಕ್ರಮಗಳು ಪ್ರಗತಿಯಲ್ಲಿವೆ ಎಂದರು.
ನಗರದಲ್ಲಿ ಕೆಲವು ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದಾರೆಂಬ ಮಾಹಿತಿ ಹಿನ್ನಲೆಯಲ್ಲಿ ಪ್ರಕರಣದ ತನಿಖೆಗಾಗಿ ಅಪರಾಧ ವಿಭಾಗದ ಡಿಸಿಪಿ ರಾಜಾ ಇಮಾಮ್ ಕಾಸಿಂ ಅವರ ನೇತೃತ್ವದಲ್ಲಿ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಲಾಗಿತ್ತು. ಈ ತಂಡ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೆ 11 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದನ್ನು ಪತ್ತೆ ಹಚ್ಚಿದ್ದು ಈಗ ಅವರನ್ನು ಬಂಧಿಸಲಾಗಿದೆ ಎಂದರು.
ವಿದೇಶಿಗರಿಗೆ ಮನೆಯನ್ನು ಬಾಡಿಗೆಗೆ ಕೊಡುವ ಮಾಲೀಕರಿಗೆ ಈಗಾಗಲೇ ಕಾನೂನು ಕ್ರಮಗಳನ್ನು ತಿಳಿಸಿದ್ದರೂ ಸಹ ಇಬ್ಬರು ಮನೆ ಮಾಲೀಕರಾದ ಶಿವರಾಮಕೃಷ್ಣ (42) ಮತ್ತು ಸಂಗಪ್ಪ ಪಾಟೀಲ (35) ಎಂಬುವವರು ನಿಯಮಗಳನ್ನು ಉಲ್ಲಂಘಿಸಿದ್ದು, ಅವರ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೇ ಈ ರೀತಿ ನಿಯಮ ಉಲ್ಲಂಘಿಸಿ ಮನೆ ಬಾಡಿಗೆಗೆ ನೀಡಿರುವುದು ದುರಾದೃಷ್ಟಕರ ಎಂದು ಹೇಳಿದರು.
ವಿದೇಶಿಗರಿಗೆ ಮನೆಯನ್ನು ಬಾಡಿಗೆಗೆ ಕೊಡುವಾಗ ಮಾಲೀಕರು ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಅವರುಗಳ ಬಗ್ಗೆ ಮಾಹಿತಿ ಸಲ್ಲಿಸುವಂತೆ ಹೇಳಿದ್ದರೂ ಸಹ ಈ ಇಬ್ಬರು ಮನೆ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದರು.




