ಪೂರ್ಣಗೊಳ್ಳದ 137 ಕಾಮಗಾರಿಗಳನ್ನು ಮುಂದಿನ 15 ದಿನಗಳಲ್ಲಿ ಪೂರ್ಣಗೊಳಿಸಬೇಕು: ಕೃಷ್ಣ ಬೈರೇಗೌಡ

3 years ago

#unfinished #works #complete #KrishnaByregowda #Shimoga

ಶಿವಮೊಗ್ಗ: ಸಾರ್ವಜನಿಕ ಆಸ್ತಿಗಳಿಗೆ ಉಂಟಾಗಿರುವ ಹಾನಿ ದುರಸ್ಥಿಗೆ 2019 ರಿಂದ 2022 ರ ಅವಧಿಯಲ್ಲಿ ಮಂಜೂರಾಗಿ ಇನ್ನೂ ಪೂರ್ಣಗೊಳ್ಳದ 137 ಕಾಮಗಾರಿಗಳನ್ನು(ಕೊರೋನಾ ಸೇರಿದಂತೆ) ಮುಂದಿನ 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರಲು ಕಾರಣವೇನು? 45 ದಿನಗಳಲ್ಲಿ ಮುಗಿಯಬೇಕಾದ ಕಾಮಗಾರಿಗಳು 2019ರಿಂದಲೂ ಬಾಕಿ ಉಳಿದಿವೆ ಎಂದರೆ ಏನರ್ಥ? ಎಂದು ಆಕ್ರೋಶ ಹೊರಹಾಕಿದರು.

ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳನ್ನೂ ಪೂರ್ಣಗೊಳಿಸಬೇಕು, ಸಂಬಂಧಪಟ್ಟ ಕಾಮಗಾರಿಗೆ ಹಣ ಪಾವತಿ ಮಾಡಬೇಕು. ಕಳೆದ ವರ್ಷದ ಬಾಕಿಯನ್ನೂ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮುಂದಿನ ವಾರದಲ್ಲಿ ಎಲ್ಲಾ ಕಾಮಗಾರಿ ಮುಗಿಸಿ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

Leave a Reply