ಬೆಂಗಳೂರು: ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1,57,87,000 ರೂ. ಮೌಲ್ಯದ 2. 170 ಕೆಜಿ ತೂಕದ ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಚೆಕ್ ಪೋಸ್ಟ್ನಲ್ಲಿ ವಶಪಡಿಸಿಕೊಂಡಿದ್ದಾರೆ.
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
ಬೆಂಗಳೂರಿನಿಂದ ಕೊಳ್ಳೇಗಾಲದತ್ತ ಹುಂಡೈ ವೆನ್ಯೂ ಕಾರಿನಲ್ಲಿ ಕಾರ್ತಿಕ್ ಹಾಗೂ ಚಿರಂತ್ ಎಂಬುವವರು ಅಕ್ರಮವಾಗಿ ಚಿನ್ನಾಭರಣವನ್ನು ಸಾಗಿಸುತ್ತಿದ್ದರು. ಕಾರನ್ನು ಎಸ್ಟಿಎಫ್ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಿನ್ನಾಭರಣಗಳು ಪತ್ತೆಯಾಗಿವೆ. ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.




