ಬೆಂಗಳೂರು: ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಕೇಂದ್ರ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಬೀದರ್ ಜಿಲ್ಲಾ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳ ತಂಡ ಬೀದರ್ ಪೊಲೀಸರ ನೆರವು ಪಡೆದು ಕಾರ್ಯಾಚರಣೆ ನಡೆಸಿತು.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪನ ಹಳ್ಳಿ ಚೆಕ್ಪೋಸ್ಟ್ ಬಳಿ ಎನ್ಸಿಬಿ ಹಾಗೂ ಬೀದರ್ ಪೊಲೀಸರು ಲಾರಿಯೊಂದನ್ನು ತಡೆದು ನಿಲ್ಲಿಸಿದರು. ಅದರಲ್ಲಿ ಪೊಟ್ಟಣಗಳನ್ನಿಟ್ಟು ಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಡ್ರೈವರ್, ಕ್ಲೀನರ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಗಾಂಜಾವನ್ನು ಎಲ್ಲಿಂದ ತರಲಾಯಿತು. ಇದು ಯಾರಿಗೆ ಸೇರಿದ್ದು ಮತ್ತು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.




