ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್ಗಳ ಜೊತೆಗೆ ಒಂದು ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್) ಪ್ರತಿ ತಿಂಗಳು ₹11 ಸಾವಿರದಿಂದ ₹17 ಸಾವಿರದವರೆಗೆ ಶಿಷ್ಯವೇತನ ಸಿಗಲಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ರಾಜ್ಯದ ಉನ್ನತ ಶಿಕ್ಷಣದಲ್ಲಿ ಸಾಮಾನ್ಯ ಪದವಿ ಕೋರ್ಸ್ಗಳ ಜೊತೆಗೆ ಕೌಶಲಾಧಾರಿತ ವಿಷಯಗಳ ಅಧ್ಯಯನಕ್ಕೂ ಅವಕಾಶ ಮಾಡಿಕೊಡಲಾಗಿದ್ದು, ಇದೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೊನೆಯ ಐದು ಮತ್ತು ಆರನೇ ಸೆಮಿಸ್ಟರ್ನಲ್ಲಿ ಶಿಷ್ಯ ವೇತನದ ಸೌಲಭ್ಯ ದೊರಕಲಿದೆ.
ಹತ್ತು ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವ ಕ್ರಿಸ್ಪ್ ಜೊತೆ ಉನ್ನತ ಶಿಕ್ಷಣದಲ್ಲಿ ಕೌಶಲಾಧಾರಿತ ಕೋರ್ಸ್ಗಳನ್ನು ಪರಿಚಯಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಮೊದಲ ವರ್ಷ 60 ಕಾಲೇಜುಗಳಲ್ಲಿ 3,600 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 239 ಕಾಲೇಜುಗಳಿಗೆ ಯೋಜನೆ ವಿಸ್ತರಿಸಲಾಗುವುದು. 2026-27ರ ವೇಳೆಗೆ 14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ ಹೊಂದಲಾಗಿದೆ.




