ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದು ಹಾಗೂ 40 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಂದಾಯ ಅವರು, ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ 170 ಕೋಟಿ ರೂ. ವೆಚ್ಚದಲ್ಲಿ ಹೊಸ ಹಾಸ್ಟೆಲ್ ನಿರ್ಮಿಸಲಾಗುವುದು ಎಂದರು.
ಕೃಷಿ ಕ್ಷೇತ್ರದ ನವೋದ್ಯಮಕ್ಕೆ ಉತ್ತೇಜನ ನೀಡಲು 67.5 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಗ್ರಿಇನೋವೇಷನ್ ಸೆಂಟರ್ ಸ್ಥಾಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.




