ಧಾರವಾಡ: ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ರೂ. 180 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ ಸುಮಾರು ರೂ. 60 ಕೋಟಿ ವೆಚ್ಚದ 40 ಕೆರೆಗಳನ್ನು ತುಂಬುವ ಕಾರ್ಯ ಸಂತೋಷ್ ಲಾಡ್ ಅವರ ಅವಿರತ ಪ್ರಯತ್ನದಿಂದ ಪೂರ್ಣಗೊಂಡಿದ್ದು, ಇದೀಗ ಎರಡನೇ ಹಂತಕ್ಕೆ ಸರ್ಕಾರ ಹಣ ನೀಡಿದೆ. ಬಹು ನಿರೀಕ್ಷಿತ ಯೋಜನೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಅನ್ನದಾತರು ಖುಷಿಗೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಯ ಎರಡನೇ ಹಂತದ 107 ಕೆರೆಗಳನ್ನು ತುಂಬುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ಕೊಡಿಸಲು ಲಾಡ್ ಅವರು ಸಾಕಷ್ಟು ಶ್ರಮಿಸಿದ್ದರು. ಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂತೋಷ್ ಲಾಡ್ ಅವರು ತಾಲೂಕಿನ ಅನ್ನದಾತರಿಗೆ ಕೊಟ್ಟ ಮಾತನ್ನು ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ.
ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಲಾಡ್: ಬಹು ನಿರೀಕ್ಷಿತ ಯೋಜನೆಯ ಸಾಕಾರಕ್ಕೆ ಸಹಕಾರ ನೀಡುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ, ಉಪ ಮುಖ್ಯಮಂತ್ರಿಗಳು ಹಾಗೂ ಬೃಹತ್ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಲಾಡ್ ಅವರು ಧನ್ಯವಾದ ತಿಳಿಸಿದ್ದಾರೆ.
ಸಚಿವರಿಗೆ ಅನ್ನದಾತರಿಂದ ಕೃತಜ್ಞತೆ: ಸಚಿವ ಲಾಡ್ ಅವರ ಅವಿರತ ಶ್ರಮದಿಂದ ಈ ಕಾರ್ಯ ಸಾಕಾರವಾಗಿದ್ದು, ಅಸಂಖ್ಯಾತ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕಲಘಟಗಿಯಂತಹ ನೀರಿನ ಕೊರತೆಯ ತಾಲೂಕಿಗೆ ಇಂತಹ ಯೋಜನೆ ಅವಶ್ಯವಾಗಿ ಬೇಕಾಗಿತ್ತು. ಇದೀಗ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಆಧುನಿಕ ಭಗೀರಥನಂತೆ ಸಚಿವ ಲಾಡ್ ಅವರು ನಮಗಾಗಿ ದುಡಿದಿದ್ದಾರೆ ಎಂದು ಕಲಘಟಗಿಯ ರೈತರು ಖುಷಿ ವ್ಯಕ್ತಪಡಿಸಿದ್ದಾರೆ.




