ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ 189 ಪ್ರಕರಣಗಳು ದಾಖಲಾಗಿವೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ.
ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ
ನಗರದಲ್ಲಿ 46 ಕೋಟಿ ಜಪ್ತಿ: ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್ಐಆರ್ಗಳು ದಾಖಲಾಗಿವೆ.
ಲೆಕ್ಕಕ್ಕೆ ಸಿಗದ 11.83 ಕೋಟಿ ನಗದು ಹಾಗೂ 19.2 ಕೋಟಿ ಮೌಲ್ಯದ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯು ಚುನಾವಣಾಧಿಕಾರಿಗಳೊಂದಿಗೆ ಸೇರಿ 4,67,629.634 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ. 7.17 ಕೋಟಿ ಮೌಲ್ಯದ ಒಟ್ಟು 227.47 ಕೆಜಿ ಮಾದಕ ವಸ್ತುಗಳು ಮತ್ತು 53.71 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ 49.58 ಕೆಜಿ ಬೆಲೆಬಾಳುವ ಲೋಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
129 ಎಫ್ಐಆರ್: 1.23 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 6.14 ಕೋಟಿ ಮೌಲ್ಯದ ಹಲವು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳನ್ನು ನಗದು, ಚಿನ್ನ, ಮದ್ಯ, ಬಿಟ್ಟಿ ವಸ್ತುಗಳನ್ನು ಸಾಗಿಸಲು ವಾಹನಗಳನ್ನು ಬಳಸಲಾಗುತ್ತಿತ್ತು. ಪೊಲೀಸರು 129 ಎಫ್ಐಆರ್ಗಳನ್ನು ದಾಖಲಿಸಿದ್ದರೆ, ಅಬಕಾರಿ ಇಲಾಖೆ 6,423 ಪ್ರಕರಣಗಳನ್ನು ದಾಖಲಿಸಿದೆ.




