ಬೆಂಗಳೂರು: ಸೈಬರ್ ಖದೀಮರು ಆನ್‌ಲೈನ್ ಮುಖಾಂತರ ಹಲವು ಇ-ಮೇಲ್ ಐಡಿಗಳನ್ನು ಹ್ಯಾಕ್ ಮಾಡಿ ಔಷಧಿ ಕಂಪನಿಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಭೇದಿಸಿ 2.16 ಕೋಟಿ ಹಣ ವಾಪಸ್ ದೂರುದಾರರ ಖಾತೆಗೆ ಮರುಪಾವತಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸೈಬರ್ ವಂಚಕರು ವಿದೇಶದಲ್ಲಿ ಕುಳಿತು ಈ ಕಂಪನಿಯ ಇ-ಮೇಲ್ ಐಡಿಯನ್ನು ಸ್ಪೂಫ್ ಮಾಡಿದ್ದು, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಔಷಧಿ ಕಂಪನಿ ಜೊತೆ ವ್ಯವಹಾರಗಳಿಗೆ ಬಳಸುತ್ತಿದ್ದರು.
ಸ್ಪೂಫ್ ಮಾಡಲಾದ ಇ-ಮೇಲ್ ಐಡಿಯನ್ನು ಬಳಸಿ 2.16 ಕೋಟಿ ಹಣವನ್ನು ಗುಜರಾತ್ ರಾಜ್ಯದ ಅಹಮದಬಾದ್ ಮ್ಯೂಲ್ ಬ್ಯಾಂಕ್ ಖಾತೆಗೆ ವರ್ಗಾಹಿಸಿರುವುದು ಕಂಪನಿಯ ಗಮನಕ್ಕೆ ಬಂದಿದೆ.
ತಕ್ಷಣ ಕಳೆದ ಫೆ.2 ರಂದು ಗ್ರೂಪ್ ಫಾರ್ಮ ಕಂಪನಿಯ ಪ್ರತಿನಿಧಿಗಳು ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸೈಬರ್ ಕ್ರೈಂ ಪೊಲೀಸರು ತಕ್ಷಣ ಬ್ಯಾಂಕ್ ಆಫ್ ಬರೋಡಾಗೆ ನೋಟೀಸ್ ಜಾರಿ ಮಾಡಿ ಮ್ಯೂಲ್ ಖಾತೆಯನ್ನು ಫ್ರೀಜ್ ಮಾಡುವಂತೆ ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ಕೈಗೊಂಡಾಗ ಈ ಸ್ಪೂಫ್ ಮಾಡಲಾದ ಇ-ಮೇಲ್ ಐಡಿಯೂ ವಿದೇಶದಿಂದ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ. ನಂತರ ತನಿಖೆ ಮುಂದುವರೆಸಿ ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಕಂಪನಿಗೆ ಸೇರಿದ ಸಂಪೂರ್ಣ ಮೊತ್ತವನ್ನು ಮರುಪಾವತಿಸುವಲ್ಲಿ ಯಶಸ್ವಿಯಾಗಿದ್ದಾರೆ.




