ಧಾರವಾಡ: ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಯಿತು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ.




