ಬೆಂಗಳೂರು: ಹೊಸವರ್ಷದ ಪಾರ್ಟಿಗೆಂದು ಮಾದಕ ವಸ್ತು ತಂದಿಟ್ಟಿದ್ದ ಎಂಬಿಎ ಪದವೀಧರ ಸೇರಿದಂತೆ ಇಬ್ಬರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 3.5 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ವಶಪಡಿಸಿಕೊಂಡಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಾಣಸವಾಡಿ ನಿವಾಸಿ, ಎಂಬಿಎ ಪದವೀಧರ ಮೊಹಮದ್ ತಾರಿಖ್ (34) ಹಾಗೂ ಕಾಡುಗೋಡಿ ನಿವಾಸಿ, ಶೇಖ್ ಅಹಮದ್ ಅರಬತ್ ಖಾನ್ (29) ಬಂಧಿತ ಆರೋಪಿಗಳು.
ಮೊಹಮದ್ ತಾರಿಖ್ ಖಾಸಗಿ ಕಂಪನಿ ಯೊಂದರ ಉದ್ಯೋಗಿ. ಶೇಖ್ ಅಹಮದ್ ವೃತ್ತಿಯಲ್ಲಿ ಸೆಕೆಂಡ್‌ಹ್ಯಾಂಡ್ ಕಾರು ವ್ಯಾಪಾರಿ.ವಿದೇಶಿ ಪ್ರಜೆಯಿಂದ ಈ ಇಬ್ಬರು ಮಾದಕ ವಸ್ತು ಖರೀದಿಸಿ ಹೊಸವರ್ಷಾಚರಣೆಗೆ ತಂದಿದ್ದರು ಎಂಬುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.
ಹೊಸವರ್ಷಾಚರಣೆಯ ಸಮಯದಲ್ಲಿ ಯುವಕರಿಗೆ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಮಾಹಿತಿಯನ್ನಾಧರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡು ನಂತರ ಕಾರ್ಯಾಚರಣೆ ಕೈಗೊಂಡು ಡಿ.31 ರಂದು ಹೊಸೂರು ರಸ್ತೆಯ ಹಿಂದೂ ಸಶಾನದ ಬಳಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಆತನನ್ನು ವಿಚಾರಣೆಗೊಳಪಡಿಸಿದಾಗ, ಮತ್ತೊಬ್ಬ ಸಹಚರನೊಂದಿಗೆ ಸೇರಿಕೊಂಡು ಅಪರಿಚಿತ ವ್ಯಕ್ತಿಯಿಂದ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ನ್ನು ಕಡಿಮೆ ಬೆಲೆಗೆ ಖರೀದಿಸಿದ್ದು ಹೊಸ ವರ್ಷಾಚರಣೆಯ ಸಮಯದಲ್ಲಿ ಮಾರಾಟ ಮಾಡಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ಹೇಳಿದ್ದಾನೆ.ಎಂಬಿಎ ಪದವೀಧರನನ್ನು ಸುದೀರ್ಘ ವಿಚಾರಣೆ ನಡೆಸಿ, ಸಶಾನದಲ್ಲಿರುವ ಸಮಾಧಿಯೊಂದರ ಪಕ್ಕದಲ್ಲಿ ಅಡಗಿಸಿಟ್ಟಿದ್ದ 2 ಕೆ.ಜಿ 480 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಹಾಗೂ ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಆರೋಪಿಯು ನೀಡಿದ ಮಾಹಿತಿಯ ಮೇರೆಗೆ, ಆತನ ಸಹಚರನನ್ನು ಬೈಯಪ್ಪನಹಳ್ಳಿಯ ಮಲ್ಲೇಶ್ ಪಾಳ್ಯದಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ, ಕಾಡುಗೋಡಿಯ ಸೀಗೇಹಳ್ಳಿಯ ವಾಸದ ಮನೆಯಲ್ಲಿಟ್ಟಿದ್ದ 720 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




