ಹರಿಯಾಣದಲ್ಲಿ ಕೋಮು ಸಂಘರ್ಷಕ್ಕೆ 3 ಬಲಿ: ನಾಳೆವರೆಗೆ ಇಂಟರ್ನೆಟ್ ಬಂದ್

3 years ago

#killed #communal #conflict #Haryana #Internet #shutdown

ದೆಹಲಿ: ಹರಿಯಾಣದ ನೂಹ್ ನಲ್ಲಿ ನಡೆದ ಕೋಮು ಸಂಘರ್ಷಕ್ಕೆ ಮೂವರು ನಾಗರಿಕರು ಬಲಿಯಾಗಿದ್ದಾರೆ. ತಪ್ಪು ಮಾಹಿತಿ ಮತ್ತು ವದಂತಿಗಳು ಹರಡದಂತೆ ತಡೆಯುವ ನಿಟ್ಟಿನಲ್ಲಿ ಇಂಟರ್ನೆಟ್ ಸೇವೆಯನ್ನು ನಾಳೆವರೆಗೆ ಸ್ಥಗಿತಗೊಳಿಸಲಾಗಿದೆ.

ಗುರುಗ್ರಾಮಕ್ಕೆ ಹೊಂದಿಕೊಂಡಂತಿರುವ ನೂಹ್ ನಲ್ಲಿ ನಿನ್ನೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಧಾರ್ಮಿಕ ಕಾರಣಕ್ಕೆ ಹೊರಟಿದ್ದ ಮೆರವಣಿಗೆ ವೇಳೆ ಕೈಕೈ ಮಿಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್ ಸೇರಿ ಮೂವರು ಬಲಿಯಾಗಿದ್ದಾರೆ. 20 ನಾಗರಿಕರು ಗಾಯಗೊಂಡಿದ್ದಾರೆ.

ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ನೂಹ್ ನ ಖೇಲ್ದಾ ಮೋದ್ ನಲ್ಲಿ ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದ ವೇಳೆ ಮೆರವಣಿಗೆಯನ್ನು ತಡೆಯಲು ಕೆಲವು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವರು ಸುತ್ತಮುತ್ತಲಲ್ಲಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ನಡೆದ ಗಲಭೆಯಲ್ಲಿ ಇಬ್ಬರು ಹೋಮ್ ಗಾರ್ಡ್ ಗಳು ಬಲಿಯಾಗಿದ್ದಾರೆ. ಇನ್ನೊಬ್ಬ ವ್ಯಕ್ತಿ ತಡ ರಾತ್ರಿ ನಡೆದ ಘರ್ಷಣೆಯಲ್ಲಿ ಬಲಿಯಾಗಿದ್ದಾನೆ.

Leave a Reply