ಬೆಂಗಳೂರು: ಚುಟುಕು ಕ್ರಿಕೆಟ್ ಐಪಿಎಲ್ ಪಂದ್ಯಾವಳಿಗಳು ಕ್ರಿಕೆಟ್ ಪ್ರೇಮಿಗಳಿಗೆ ಹಿಡಿಸಿರುವ ಹುಚ್ಚು ಅಂತಿಂತದ್ದಲ್ಲ. ಈ ಮ್ಯಾಚ್ ಗಳನ್ನು ಮೈದಾನದಲ್ಲಿ ನೋಡಲು ಅಭಿಮಾನಿಗಳು ಹಾತೊರೆಯುತ್ತಾರೆ. ಇಂತಹ ಅಭಿಮಾನವನ್ನು ಲಾಭವಾಗಿಸಿಕೊಂಡ ವಂಚಕರು ಕ್ರೀಡಾಭಿಮಾನಿಗಳಿಗೆ ಪಂಗನಾಮ ಹಾಕುತ್ತಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಇಂತಹ ವಂಚನೆಯ ಕತೆ ಇದು. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಹಾಗೂ ಆರ್ಸಿಬಿ ಪಂದ್ಯದ ಟಿಕೆಟ್ ಖರೀದಿಸಲು ಹೋದ ನಗರದ ಅಭಿಮಾನಿಯೊಬ್ಬ ಬರೋಬ್ಬರಿ 3 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿರುವ ಈ ಎರಡೂ ತಂಡಗಳು ಪ್ಲೇ ಆಫ್ ಹಂತಕ್ಕೇರಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯ ಮಹತ್ವದ ಪಂದ್ಯವಾಗಿರುವ ಕಾರಣ ಈ ಪಂದ್ಯದ ಕಾವು ಹೆಚ್ಚಾಗಿದೆ. ಹೀಗಾಗಿ ಈ ಪಂದ್ಯ ನೋಡಲು ಅಭಿಮಾನಿಗಳು ಕಾಳಸಂತೆಯಲ್ಲಿ ದುಬಾರಿ ಬೆಲೆ ಕೊಟ್ಟು ಟಿಕೆಟ್ ಖರೀದಿ ಮಾಡುತ್ತಿದ್ದಾರೆ.
ಇದನ್ನು ಗಮನಿಸಿದ ವಂಚಕ ಪದ್ಮ ಸಿನ್ಹಾ ವಿಜಯ್ ಕುಮಾರ್ ಐಪಿಎಲ್_2024 ಟಿಕೆಟ್ಸ್_24 ಎಂಬ ಖಾತೆಯ ಮೂಲಕ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ಮಾಡಿಕೊಡಲಾಗುವುದು ಎಂದು ಹೇಳಿ ತನ್ನ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಮಾಹಿತಿ ಎಲ್ಲವನ್ನೂ ಹಂಚಿಕೊಂಡು ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ.
ಪ್ರತಿ ಟಿಕೆಟ್‌ಗೆ 2,300 ರೂ. ದರದಂತೆ 3 ಟಿಕೆಟ್‌ಗೆ 7,900 ರೂ. ನಿಗದಿ ಪಡಿಸಿದ್ದ. ಈ ಮೂಲಕ ಟಿಕೆಟ್ ಖರೀದಿಸಲು ಬರುವವರ ವಿಶ್ವಾಸ ಸಂಪಾದಿಸಿದ್ದ. ಇದನ್ನು ನಂಬಿದ ಬೆಂಗಳೂರು ಮೂಲದ 28 ವರ್ಷದ ಅಭಿಮಾನಿಯೊಬ್ಬ ಟಿಕೆಟ್ ಖರೀದಿಸಲು ಮುಂದಾಗಿ ತನ್ನ ಖಾತೆಯಲ್ಲಿದ್ದ 3 ಲಕ್ಷ ಕಳೆದುಕೊಂಡಿದ್ದಾನೆ.
ವಿಜಯ್ ಕುಮಾರ್ ಆನ್‌ಲೈನ್ ಪಾವತಿ ಭರವಸೆ ನೀಡಿದ್ದಂತೆ ಈ ಅಭಿಮಾನಿಗೆ 3 ಇ-ಟಿಕೆಟ್‌ಗಳನ್ನು ವರ್ಗಾಯಿಸಿದ್ದಾನೆ. ಆದರೆ, ಹಣ ಪಾವತಿ ನಿಲ್ಲದೆ ಆಗಾಗ ಈ ಅಭಿಮಾನಿಯ ಖಾತೆಯಿಂದ 7,900 ರೂ.ಗಳಂತೆ ಹಣ ವರ್ಗಾವಣೆ ಆಗಿ 3 ಲಕ್ಷ ರೂ.ಗಳಿಗೂ ಅಧಿಕ ಮೊತ್ತ ವಂಚಕನ ಖಾತೆಗೆ ಸೇರಿದೆ.
ಈ ವೇಳೆ ಅಭಿಮಾನಿ ವಿಜಯ್ ಕುಮಾರ್‌ಗೆ ಕರೆ ಮಾಡಿ ವಿಚಾರಿಸಿದಾಗ ತಾಂತ್ರಿಕ ದೋಷ ಕಾರಣ ಹೀಗಾಗಿದ್ದು, ಹಣವನ್ನು ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾನೆ.
ಆ ಬಳಿಕವೂ ಕೂಡ ಹಣ ವರ್ಗಾವಣೆ ನಡೆದ ಕಾರಣ ಅನುಮಾನಗೊಂಡ ಅಭಿಮಾನಿ ಪೊಲೀಸರಿಗೆ ದೂರು ನೀಡಿದ್ದಾನೆ. ಹಣ ಪಾವತಿಯನ್ನು ತಡೆಯುವ ಹೊತ್ತಿಗಾಗಲೇ 3 ಲಕ್ಷ ರೂ. ಗಳಿಗೂ ಅಧಿಕ ಮೊತ್ತವನ್ನು ಕಳೆದುಕೊಂಡಿದ್ದು, ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.


