300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆ: ಡಿ ಕೆ ಶಿವಕುಮಾರ್

2 years ago

ಬೆಂಗಳೂರು: 1.40 ಕೋಟಿ ಜನಸಂಖ್ಯೆ ಇದ್ದು, 1.10 ಲಕ್ಷ ನೋಂದಾಯಿತ ವಾಹನಗಳಿದ್ದು, ಇದು ನಗರದ ಜನಜೀವನದ ಮೇಲೆ ವಿಪರೀತ ಒತ್ತಡ ಸೃಷ್ಟಿಸಿದೆ. ಆದ್ದರಿಂದ ಕೈಗಾರಿಕೆಗಳು ಬೆಂಗಳೂರಿನಿಂದ ಹೊರಗಿರುವ ಪ್ರದೇಶಗಳಿಗೆ ಹೋಗುವುದನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹವನ್ನೇ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೂ ಹೊಸ ನೀತಿ ತರಲಾಗಿದೆ. ವಿಶೇಷವಾಗಿ ರಾಜ್ಯದ 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಗಮನ ಹರಿಸಲಿದ್ದೇವೆ. ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನೆರವಿಗೆ ಪೋರ್ಟಲ್ ಆರಂಭಿಸಲಾಗಿದೆ ಎಂದರು.

ರಾಜ್ಯದಲ್ಲಿ ಭೂಮಿಯ ಬೆಲೆ ಜಾಸ್ತಿ ಇದೆ. ಹೀಗಾಗಿ ಉದ್ಯಮಿಗಳಿಗೆ ನೆರವು ನೀಡುವ ಬೇರೆಬೇರೆ ಕ್ರಮಗಳತ್ತ ಚಿಂತಿಸಲಾಗುತ್ತಿದೆ. ನಾವು ಹೂಡಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆಯೇ ವಿನಾ ನೆರೆಹೊರೆಯ ರಾಜ್ಯಗಳ ಜತೆಯಲ್ಲ. ಭೂಮಿಯ ಬೆಲೆ ಹೆಚ್ಚಾಗಲು ಇದೂ ಒಂದು ಕಾರಣವಾಗಿದೆ ಎಂದರು.

Leave a Reply