ಬೆಂಗಳೂರು: ಗದಗ ಜಿಲ್ಲೆಯ ಅತ್ಯಂತ ಪ್ರತಿಷ್ಠಿತ ಕಪ್ಪತಗುಡ್ಡ ವನ್ಯ ಜೀವಿಧಾಮದ 322 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಘೋಷಿಸಿ ಅಂತಿಮ ಅಧಿಸೂಚನೆ ಹೊರಡಿಸಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಈ ಹಿಂದೆ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿತ್ತು. ಅದಾದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿರುವ ಇಲ್ಲಿ 298.89 ಚದರ ಕಿ.ಮೀ. ಕಂದಾಯ ಗ್ರಾಮಗಳು ಹಾಗೂ 62 ಗ್ರಾಮಗಳಿವೆ. 23.80 ಕಿ.ಮೀ ಅಧಿಸೂಚಿತ ಅರಣ್ಯ ಪ್ರದೇಶವಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಉತ್ತರ ದಿಕ್ಕಿನಲ್ಲಿ 1 ಕಿ.ಮೀನಿಂದ 3.25 ಕಿ.ಮೀವರೆಗೆ, ಪಶ್ಚಿಮ ದಿಕ್ಕಿನಲ್ಲಿ 4.30 ಕಿ.ಮೀವರೆಗೆ, ವಾಯವ್ಯ ದಿಕ್ಕಿನಲ್ಲಿ 1.96 ಕಿ.ಮೀವರೆಗೆ ಪರಿಸರ ಸೂಕ್ಷ್ಮ ಪ್ರದೇಶವೆಂದು ನಿಗದಿಪಡಿಸಲಾಗಿದೆ. ಉಳಿದ ದಿಕ್ಕುಗಳಲ್ಲಿ 1 ಕಿ.ಮೀ ಮಾತ್ರ ಇದೆ.
ಈ ಘೋಷಣೆಯಿಂದಾಗಿ ಕಪ್ಪತ ಗುಡ್ಡ ಪ್ರದೇಶದಲ್ಲಿ ಇನ್ನು ಮುಂದೆ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳ ಸ್ಥಾಪನೆಗೆ ನಿರ್ಬಂಧ ಇರಲಿದೆ. ಯಾವುದೇ ಹೊಸ ಉಷ್ಣ ವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಯಾವುದೇ ಅಪಾಯಕಾರಿ ವಸ್ತು ಬಳಕೆ, ಉತ್ಪಾದನೆ ಅಥವಾ ಸಂಸ್ಕರಣೆಗೆ ನಿರ್ಬಂಧ ಜಾರಿಯಾಗಲಿದೆ.
ನೈಸರ್ಗಿಕ ಜಲಮೂಲಗಳು ಅಥವಾ ಸಂಸ್ಕರಿಸದ ತ್ಯಾಜ್ಯಗಳ ವಿಸರ್ಜನೆ ನಿಷೇಧ, ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಘಟಕ ಮತ್ತು ಜೈವಿಕ, ವೈದ್ಯಕೀಯ ತ್ಯಾಜ್ಯ ಸುಡುವ ಘಟಕಕ್ಕೆ ಅವಕಾಶ ಇರುವುದಿಲ್ಲ. ಈಗಿರುವ ಹಾಗೂ ಹೊಸದಾಗಿ ಇಟ್ಟಿಗೆ ಗೂಡುಗಳ ಘಟಕ ಸ್ಥಾಪನೆಗೆ ನಿಷೇಧ ಜಾರಿಯಾಗಲಿದೆ.