ಬೆಂಗಳೂರು: ರಾಜ್ಯದಲ್ಲಿ 38 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದು, ಬೆಂಗಳೂರಿನಲ್ಲಿ ವಯೋ ವೃದ್ದರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಡಯಾಬಿಟಿಸ್, ಹೃದಯದ ಕಾಯಿಲೆ ಸೇರಿದಂತೆ ಬಹು ಅಂಗಾಂಗಳ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, SEPTIC SHOCK WITH MULTI ORGAN SYNDROME ನಿಧನಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಅಲ್ಲದೇ ಅವರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದಿದ್ದಾರೆ.
ಇದೇ ತಿಂಗಳ 13 ರಂದು ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೇ. 17 ರಂದು ನಿಧನರಾಗಿದ್ದಾರೆ ಎಂದು ಹೇಳಿದ್ದಾರೆ.
SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಲಾಗಿದ್ದು, ಸರ್ಕಾರ ಅಗತ್ಯ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.
ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ. ಉಸಿರಾಟದ ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಮುಂಜಾಗ್ರತೆ ವಹಿಸಿ ತಪಾಸಣೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.




