ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಅಶೋಕ್ ಅವರು, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದರು.
ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ. ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದರು.
ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ಬೈರತಿ ಸುರೇಶ್, ಮುಡಾದಲ್ಲಿ ಯಾವ ಹಗರಣ ಇದೆ. ಅದರಲ್ಲಿ ಯಾವ ಹಗರಣವೂ ಇಲ್ಲ. ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರಿಗೆ ನಿವೇಶನ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇದರ ವರದಿ ಬಂದ ನಂತರ ಮುಂದಿನ ಚರ್ಚೆ ಮಾಡಬಹುದು ಎಂದರು.
ತನಿಖೆ ನಡೆಸುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ. ಅದು ಮುಗಿಯುವವರೆಗೂ ಕಾಯಬೇಕು. ಅದಕ್ಕೂ ಮೊದಲು ಸಿಬಿಐ, ಎಫ್ಬಿಐ ತನಿಖೆಗೆ ಕೊಡಿ ಎಂದರೆ ಬಿಜೆಪಿ-ಜೆಡಿಎಸ್ನವರು ಹೇಳಿದರೆ, ಸರ್ಕಾರ ಅದನ್ನು ಪಾಲನೆ ಮಾಡಬೇಕೆ. ಸರ್ಕಾರಕ್ಕೆ ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡಲಿದೆ ಎಂದರು.
ಮುಡಾದಲ್ಲಿ ಏನಾಗಿದೆ ಎಂದು ಸಿಬಿಐ ತನಿಖೆಗೆ ಒಪ್ಪಿಸಬೇಕು. ಹಗರಣ ನಡೆದಿದ್ದರೆ ತಾನೇ ಸಿಬಿಐಗೆ ವಹಿಸುವುದು. ಏನೂ ಆಗೇ ಇಲ್ಲ ಎಂದ ಮೇಲೆ ಸಿಬಿಐ ತನಿಖೆ ಯಾಕೆ? ನಮಲ್ಲಿ ಪೊಲೀಸ್ ಅಧಿಕಾರಿಗಳಿಲ್ಲವೇ, ಬಿಜೆಪಿಯವರು ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು ಎಂದರು.
ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್ ಅವರಿಗೂ ಸಂಬಂಧ ಇಲ್ಲ. ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಮೈಸೂರಿನಲ್ಲಿ ಅವರ ಪಾತ್ರ ಇರುವುದಿಲ್ಲ ಎಂದರು.




