ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭಗೊಂಡಿರುವ ಬೆನ್ನಲ್ಲೇ ನಗದು, ಮದ್ಯ ಉಚಿತ ಉಡುಗೊರೆಗಳ ಜಪ್ತಿ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕಳೆದ ಮಾ.16 ರಿಂದ ಇಲ್ಲಿಯವರೆಗೆ ನಗದು ಸೇರಿ 402.39 ಕೋಟಿ ಮೌಲ್ಯದ ಚಿನ್ನಾಭರಣ, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ವಶಪಡಿಸಿಕೊಂಡ ವಿವರ:
ಮದ್ಯ – 177 ಕೋಟಿ ರೂ.
ನಗದು – 75.31 ಕೋಟಿ ರೂ.
ಡ್ರಗ್ಸ್ – 10.73 ಕೋಟಿ ರೂ.
ಚಿನ್ನ – 57.67 ಕೋಟಿ ರೂ.
ಬೆಳ್ಳಿ – 1.18 ಕೋಟಿ ರೂ.
ವಜ್ರ – 9 ಲಕ್ಷ ರೂ.
ಉಚಿತ ಉಡುಗೊರೆ ಮತ್ತು ಇತರ ವಸ್ತುಗಳು – 72.27 ಕೋಟಿ ರೂ.
1,937 ಎಫ್ಐಆರ್ ದಾಖಲು
1,685 ವಿವಿಧ ರೀತಿಯ ವಾಹನಗಳ ವಶ
ಪೊಲೀಸ್, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ನಡೆಸಿದ ತಪಾಸಣೆ ಸಂದರ್ಭದಲ್ಲಿ 132.17 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.
ಅಬಕಾರಿ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 176.59 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್ ವಶಪಡಿಸಿಕೊಂಡಿದ್ದರೆ. ಆದಾಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರವನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 79.83 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.




