ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿವೆ ಸಣ್ಣ ಸಿಲಿಂಡರ್: ಸುರಕ್ಷತೆ ಆದ್ಯತೆಯಾಗಬೇಕು

4 years ago

ದೆಹಲಿ: 5ಕೆಜಿಯ ಸಣ್ಣ LPG ಸಿಲಿಂಡರ್‌ಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡುವ ಕುರಿತು ಕೇಂದ್ರ ಸರ್ಕಾರ ಆಲೋಚನೆ ನಡೆಸಿದೆ. IOCL ಮತ್ತು BPCL ನಂತಹ ತೈಲ ಕಂಪನಿಗಳ ಪ್ರತಿನಿಧಿಗಳು ಪಡಿತರ ಅಂಗಡಿಗಲ್ಲಿ ಸಣ್ಣ LPG ಸಿಲಿಂಡರ್‌ಗಳ ಚಿಲ್ಲರೆ ಮಾರಾಟ ಮಾಡುವ ಕೇಂದ್ರದ ಪ್ರಸ್ತಾವ ಬೆಂಬಲಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಕಾರ್ಯಸಾಧ್ಯತೆ ಹೆಚ್ಚಿಸುವ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೆ ಅವಕಾಶ ನೀಡಲು ಮತ್ತು ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ನೀಡಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.

ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಗಳ ಪ್ರತಿನಿಧಿಗಳ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಸಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ, ಹಣಕಾಸು ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳ ಪ್ರತಿನಿಧಿಗಳು ಕೂಡ ಚರ್ಚೆ ನಡೆಸಿದ್ದರು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳು ಕೂಡ ಸಭೆಯಲ್ಲಿ ಹಾಜರಿದ್ದರು.

ಈ ಮೂಲಕ ದೇಶದಲ್ಲಿರುವ ಸುಮಾರು 5.26 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನುಮುಂದೆ 5 ಕೆಜಿ ಸಣ್ಣ ಸಿಲಿಂಡರ್ ಗಳು ಸಿಗುವ ಸಾಧ‍್ಯತೆಗಳು ದಟ್ಟವಾಗಿವೆ. ಆದರೆ, ಸುರಕ್ಷತೆ ಮತ್ತು ಇನ್ನಿತರ ಕ್ರಮಗಳ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕಾದ ಅಗತ್ಯವಿದೆ. ಏಕೆಂದರೆ, ದೇಶದಲ್ಲಿರುವ ಬಹುತೇಕ ನ್ಯಾಯಬೆಲೆ ಅಂಗಡಿಗಳು ಜನವಸತಿ ಪ್ರದೇಶದಲ್ಲಿವೆ. ಸಿಲಿಂಡರ್ ಗಳನ್ನು ದಾಸ್ತಾನು ಇಡಲು, ಸರಬರಾಜು ಮಾಡಲು ವ್ಯವಸ್ಥೆ ಮಾಡಬಹುದು. ಆದರೆ, ಅದರೊಂದಿಗೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಬೇಕಾದ ಅನಿವಾರ್ಯತೆ ಇದೆ.

Leave a Reply