ಬೆಂಗಳೂರು: ಕನ್ನಡ ಪುಸಕ್ತ ಪ್ರಾಧಿಕಾರದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ಎಲ್ಲಾ ಪುಸ್ತಕಗಳ ಮೇಲೆ ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬುದು ಪ್ರಾಧಿಕಾರದ ಉದ್ದೇಶವಾಗಿದೆ.




