ಕಲಬುರಗಿ: ಕಲಬುರಗಿ, ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.ಗಳಂತೆ 500 ಕೋಟಿ ರೂ. ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಅತ್ಯಂತ ಭೀಕರ ಬರಗಾಲದಿಂದ ರೈತ ಸಮುದಾಯ ತತ್ತರಿಸಿತು. ಹೀಗಾಗಿ ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಬರಗಾಲ ಕಾರಣ ಕೇಂದ್ರ ಸರ್ಕಾರ ಕಾಲಮಿತಿಯಲ್ಲಿ ರೈತರಿಂದ ಅರ್ಜಿ ಕಾಯದೆ ಪರಿಹಾರ ನೀಡದ ಕಾರಣ ಸುಮಾರು 40 ಲಕ್ಷ ರೈತರಿಗೆ ರಾಜ್ಯ ಸರ್ಕಾರವೆ ಈವರೆಗೆ ಎಸ್.ಡಿ.ಆರ್.ಎಫ್. ನಿಧಿಯಡಿ 2,451 ಕೋಟಿ ರೂ. ಬರಗಾಲ ಪರಿಹಾರ ನೀಡಿದೆ. ಇಷ್ಟೊಂದು ಸಂಖ್ಯೆಯಲ್ಲಿ ಬರ ಪರಿಹಾರ ನೀಡಿರುವುದು ಐತಿಹಾಸಿಕ ಕ್ರಮ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್. ಹಣ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸಿದ ಕಾರಣ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದ ಕಾರಣ ಕೇಂದ್ರ ಹಣ ಬಿಡುಗಡೆ ಮಾಡಿತು. ಅದು ಹಣ ಸಹ ರೈತರಿಗೆ ನೀಡಲಾಗಿದೆ. ಇನ್ನು ಬೆಳೆ ವಿಮೆನಡಿ 1,756 ಕೋಟಿ ರೂ. ಪರಿಹಾರ ರೈತರ ಖಾತೆಗೆ ಹಣ ನೀಡಲಾಗಿದೆ. ಒಟ್ಟಾರೆ ಬರಗಾಲ ಕಾರಣ ಎಸ್.ಡಿ.ಆರ್.ಎಫ್-ಎನ್.ಡಿ.ಆರ್.ಎಫ್ ಹಣ, ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹೀಗೆ ಸುಮಾರು 6,000 ಕೋಟಿ ರೂ. ಪರಿಹಾರ ಅನ್ನದಾತರಿಗೆ ಡಿ.ಬಿ.ಟಿ. ಮೂಲಕ ನೀಡಲಾಗಿದೆ ಎಂದರು.




