ಮಾಜಿ ಮೇಯರ್ ಜಿ.ಪದ್ಮಾವತಿ ನೇತೃತ್ವದಲ್ಲಿ 5000 ಆಹಾರ ಕಿಟ್ ವಿತರಣೆ
ಕೊರೋನ ಸೋಂಕು ಹೆಚ್ಚಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣ
ಬೆಂಗಳೂರು: ಕೊರೋನ ಸೋಂಕು ಹೆಚ್ಚಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣ. ದೀಪ ಹಚ್ಚುವುದರಿಂದ ,ಜಾಗಟೆ ಬಡಿಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೊರೋನ ಸಾಂಕ್ರಮಿಕ ರೋಗ ತಡೆಗಟ್ಟಲು ಕೇಂದ್ರ ಸರ್ಕಾರ ಸರಿಯಾದ ನಿರ್ವಹಣೆ ಮಾಡಿದ್ದರೆ, ಲಕ್ಷಾಂತರ ಜನ ಸಾಯುತ್ತ ಇರಲ್ಲಿಲ. ಕರ್ನಾಟಕದಲ್ಲಿ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. 1ಕೋಟಿ ಜನ ಆಸ್ಪತ್ರೆಯಲ್ಲಿ ನರಳುತ್ತಿದ್ದಾರೆ. 4 ಕೋಟಿ ಜನ ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಚಾಮರಾಜನಗರದಲ್ಲಿ 36 ಜನ ಆಕ್ಸಿಜನ್ ಸಿಗದೇ ಮೃತಪಟ್ಟರು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾರೂ ಮೃತಪಟ್ಟಿಲ್ಲ ಎಂದು ವರದಿ ನೀಡುತ್ತಾರೆ. ಆಕ್ಸಿಜನ್ ಸಿಗದೇ ಮೃತಪಟ್ಟ 36 ಕುಟುಂಬಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಲಾಯಿತು. ಕಾರ್ಮಿಕ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ಪರಿಹಾರ ಇನ್ನೂ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿಲ್ಲ ಎಂದರು.
ಜಿ.ಪದ್ಮಾವತಿರವರು ಮಾತನಾಡಿ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶ ಮೇರೆಗೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 18 ತಿಂಗಳಿಂದ ಆಹಾರ ಕಿಟ್ ಮತ್ತು ಆಹಾರ ಪ್ಯಾಕೇಟ್ ವಿತರಣೆ ಸತತವಾಗಿ ನಡೆಯುತ್ತಿದೆ ಹಾಗೂ ಕೊವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಮತ್ತು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಬಡವರ ಪರ ಇರುವ ಪಕ್ಷ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶ್ರೀ ರಾಮ ಮಂದಿರ ಆಟದ ಮೈದಾನದಲ್ಲಿ ಕೊರೋನ ಸಂಕಷ್ಟದ ಸಮಯ ಉದ್ಯೋಗನಷ್ಟ ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವ 5 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.
ದೀಪ ಬೆಳಗಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಮ್ ಅಹಮದ್ ಮತ್ತು ಮಾಜಿ ಮೇಯರ್ ಜಿ.ಪದ್ಮಾವತಿ ಆಹಾರ ಕಿಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಬೆಂಗಳೂರುನಗರ ಕೇಂದ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೇಖರ್ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್, ಮಾಜಿ ಮಹಾನಗರ ಪಾಲಿಕೆ ಸದಸ್ಯ ಜಿ.ಕೃಷ್ಣಮೂರ್ತಿ, ಮೋಹನ್ ಕುಮಾರ್ ಹಾಗೂ ಶ್ರೀ ರಾಮಮಂದಿರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪಲ್ ನಾಗರಾಜ್ ಹಾಗೂ ರಾಜಾಜಿನಗರ ಮಹಿಳಾ ಅಧ್ಯಕ್ಷೆ ಪಲ್ಲವಿ ಪ್ರಭು, ಯುವ ಕಾಂಗ್ರೆಸ್ ಮುಖಂಡರಾದ ಸಂತೋಷ್, ಸಂದೀಪ್ ಸುನೀಲ್ ಮೊದಲಾದವರು ಉಪಸ್ಥಿತರಿದ್ದರು.




