ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ 556 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಬೋಸರಾಜು ತಿಳಿಸಿದರು.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಾಯುಕ್ತದಲ್ಲಿ ಒಟ್ಟು 1146 ಹುದ್ದೆಗಳಿವೆ. ಇದರಲ್ಲಿ 556 ಹುದ್ದೆಗಳು ಖಾಲಿಯಿವೆ. ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಿದರು.
ಲೋಕಾಯುಕ್ತದಲ್ಲಿ ಎಸ್‍ಪಿಯಂತಹ ಹುದ್ದೆಗಳು ಖಾಲಿ ಇದ್ದರೆ ದಾಳಿ ನಡೆಸಿ ವಿಚಾರಣೆ ನಡೆಸುವುದು ಕಷ್ಟ. ಹೀಗಾಗಿ ಬೇಡಿಕೆ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದೇವೆ ಎಂದರು.




