ಬೆಂಗಳೂರು: ರಾಜ್ಯದ ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಕಡ್ಡಾಯವಾಗಿರಬೇಕು ತಪ್ಪಿದಲ್ಲಿ ಅಂತಹ ಸಂಸ್ಥೆ ಅಥವಾ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾನೂನು ಸಮರ್ಪಕ ಅನುಷ್ಠಾನ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಈ ವೇಳೆ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕುರಿತಂತೆ ನಿಯಮಾವಳಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಮುಖವಾಗಿ ಗಡಿ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ಕನ್ನಡ ಕಡ್ಡಾಯ ನಾಮಫಲಕ ನಿಯಮ ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ದೃಷ್ಟಿಯಿಂದ ಇಲಾಖೆಯ ಅಧಿಕಾರಿಗಳು ಪೊಲೀಸರು ಮತ್ತು ಸ್ಥಳೀಯ ಸಂಸ್ಥೆಗಳ ನೆರವಿನೊಂದಿಗೆ ಕೆಲಸ ಮಾಡಬೇಕು ಎಂದು ಆದೇಶಿಸಿದರು.
ನಗರ ಪ್ರದೇಶದಲ್ಲಿ ಕಾನೂನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ನೆರವಾಗುವ ದೃಷ್ಟಿಯಿಂದ ಪೊಲೀಸರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಿದ ಅವರು ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂದು ತಿಳಿಸಿದರು.




