ರಾಜ್ಯದಲ್ಲಿ ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್‌ಟಿ ಸಂಗ್ರಹ

3 years ago

ಬೆಂಗಳೂರು: ಪ್ರಸಕ್ತ ವಿಧಾನಸಭೆಯ ಹಣಕಾಸು ಮಂತ್ರಿಯಾಗಿ ತಮ್ಮ ಕೊನೆಯ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಂಚ ಸಮಾಧಾನ ಪಡುವ ಸಂಗತಿ ಬೆಳಕಿಗೆ ಬಂದಿದೆ.

ಜನವರಿ ತಿಂಗಳಲ್ಲಿ ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ದಾಖಲೆ ಬರೆದಿದೆ. ಕೋವಿಡ್, ಜಾಗತಿಕ ಆರ್ಥಿಕ ಹಿಂಜರಿತ ಸೇರಿದಂತೆ ಹಲವು ಕಾರಣದಿಂದಾಗಿ ಕಳೆದ ಎರಡು ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಕುಸಿತ ಉಂಟಾಗಿತ್ತು.

ಇದೀಗ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಂಡಿದ್ದು ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರ ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಸಾಧ್ಯವಗಲಿದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆಯ ರಾಜ್ಯವಾಗಿ ಮುಂದುವರೆದಿದೆ ಎಂದಿದ್ದಾರೆ.

Leave a Reply