66ನೇಕನ್ನಡ ರಾಜ್ಯೋತ್ಸವ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನುಡಿ ನಮನ
ಬಿ.ಬಿ.ಎಂ.ಪಿ. ಕೇಂದ್ರ ಕಛೇರಿ ಅವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಂಚಿನ ಪ್ರತಿಮೆ ಸ್ಥಾಪನೆಗೆ ಮನವಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘ(ನೋ) ಕೇಂದ್ರ ಕಛೇರಿ ಅವರಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕನ್ನಡ ಧ್ವಜಾರೋಹಣ ಮತ್ತು ಮೇರುನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಮತ್ತು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತರಾದ ದಯಾನಂದ್, ತುಳಸಿ ಮದ್ದೇನೆನಿ, ತ್ರಿಲೋಕ ಚಂದ್ರ, ಮಾಜಿ ಮೇಯರ್ ಜೆ.ಹುಚ್ಚಪ್ಪ, ಕನ್ನಡ ಜನಶಕ್ತಿ ಕೇಂದ್ರದ ರಾಜ್ಯಾಧ್ಯಕ್ಷ ಸಿ.ಕೆ.ರಾಮೇಗೌಡ, ಬೃ.ಬೆ.ಮ.ಪಾ.ನೌ. ಕನ್ನಡ ಸಂಘದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ನೇರವೆರಿಸಿದರು.
ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ಪವರ್ ಸ್ಟಾರ್, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ಆಗಲಿಕೆಯಾಗಿರುವುದು ದುಖಃಕರ ಸಂಗತಿ. ರಾಜ್ಯಕ್ಕೆ ತುಂಬಾಲಾರದ ನಷ್ಟವಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದರು. ಬಿ.ಬಿ.ಎಂ.ಪಿ. ಕೇಂದ್ರ ಕಛೇರಿ ಅವರಣದಲ್ಲಿರುವ ಡಾ.ರಾಜ್ ಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸಲು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ. ಬಿ.ಬಿ.ಎಂ.ಪಿ. ಕನ್ನಡ ನೌಕರರ ಸಂಘ ಕನ್ನಡ ನಾಡು, ನುಡಿ ಭಾಷೆಗೆ ಶ್ರಮಿಸುತ್ತಿದೆ. ಕನ್ನಡ ಸಂಘದ ಅವರಣದಲ್ಲಿ ಡಾ.ರಾಜ್ ಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಕನ್ನಡ ಸಂಘದ ಸ್ವಂತ ವೆಚ್ಚದಲ್ಲಿ ನಿರ್ಮಿಸಲು ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಅನುಮತಿ ನೀಡಿದರೆ ಇನ್ನು ಎರಡು ತಿಂಗಳಲ್ಲಿ ರಾಜ್ ಕುಮಾರ್ ಅವರ ಕುಟುಂಬಸ್ಥರನ್ನ ಭೇಟಿ ಮಾಡಿ ಪ್ರತಿಮೆ ಆನಾವರಣ ಮಾಡಲಾಗುವುದು ಎಂದರು.




