ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ

2 years ago

#KadalekayiParishe #Kadumalleswara #Temple

ಬೆಂಗಳೂರು: ಮಲ್ಲೇಶ್ವರ ಕಾಡುಮಲ್ಲೇಶ್ವರದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಜರುಗಲಿದೆ ಎಂದು ಮಲ್ಲೇಶ್ವಂನ ಕಾಡುಮಲ್ಲೇಶ್ವರ ಗೆಳಯರ ಬಳಗ ಅಧ್ಯಕ್ಷ ಬಿ.ಕೆ.ಶಿವರಾಂರವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲೇಶ್ವಂನ ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜರಾಯಿ ಇಲಾಖೆ ಸಹಕಾರದಲ್ಲಿ ಬೆಂಗಳೂರು ನಗರ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಸಂದರ್ಭದಲ್ಲಿ ಪ್ರತಿವರ್ಷದಂತೆ ಮೂರು ದಿನಗಳ ಕಾಲ 2-12-2023ರಿಂದ 4-12-2023ರ ವರೆಗೆ ಕಡಲೆಕಾಯಿ ಪರಿಷೆ ಮತ್ತು ಬಯಲು ರಂಗ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

800 ಕೆಜಿ ಕಡಲೆಕಾಯಿಗಳಿಂದ ಶೃಂಗಾರಿಸಿದ 20 ಅಡಿ ಎತ್ತರ 20 ಅಡಿ ಉದ್ದದ  ನಂದಿಯನ್ನು ಇಡಲಾಗುತ್ತದೆ. ಡಿಸೆಂಬರ್ 2ರಂದು ಬೆಳಗ್ಗೆ 11ಗಂಟೆಯ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರು ಮುನಿರತ್ನ, ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಡಲೆಕಾಯಿ ಪರಿಷೆ ಉದ್ಘಾಟನೆ ಮತ್ತು ಹಸಿರು ಚೈತನ್ಯೋತ್ಸವ ಗಿಡ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಸಂಜೆ ಮಹಿಳಾ ಯಕ್ಷಗಾನ ಮಂಡಳಿ ವತಿಯಿಂದ ಶೈಲಜಾ ಜೋಶಿ ಮತ್ತು ತಂಡದವರಿಂದ ಯಕ್ಷಗಾನ. ಡಿಸೆಂಬರ್ 3ನೇ ತಾರೀಖು ಬೆಳಗ್ಗೆ 11-30ಕ್ಕೆ ಪಂಚಮ ಸಂಗೀತ ತಂಡ ಎಲ್.ಶಿವಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ. ಸಂಜೆ ಮಧು ಮನೋಹರ್ ಮತ್ತು ಕಾರ್ತಿಕ್ ಪಾಂಡವಪುರ ತಂಡದವರಿಂದ ಗಾನ ಗಂಧರ್ವ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಸವಿ ನೆನಪಿನಲ್ಲಿ ಮಧುರ ನೆನಪಿನ ಗಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೋಹನ್ ರಾವ್ ರವರು ಉಪಸ್ಥಿತರಿರುತ್ತಾರೆ ಎಂದು ಮಾಹಿತಿ ನೀಡಿದರು.

ದಿನಾಂಕ 4ಡಿಸೆಂಬರ್ ಬೆಳಗ್ಗೆ 9-30ಕ್ಕೆ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಹಾಗೂ ಪ್ರಸಾದ ವಿನಿಯೋಗ. ಸಂಜೆ 6-30ಕ್ಕೆ ಭವಾನಿ ಗಾನ ವೃಂದದವರಿಂದ ವಿದೂಷಿ ಶೈಲಜ ಶ್ರೀನಾಥ್ ಮತ್ತು ತಂಡದವರಿಂದ ಶಿವ ವೀಣಾ ಗಾನ ಸಂಗಮ. ಮುಖ್ಯ ಅತಿಥಿಗಳು: ಶ್ರೀ ವಿದ್ಯಾಮಂದಿರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಾಬು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯಲ್ಲಿ ಪರಿಸರ ಉಳಿಸಿ, ಬೆಳಸಲು ಹಸಿರು ಚೈತನ್ಯೋತ್ಸವ ಮೂಲಕ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯಲ್ಲಿ ತಮಿಳುನಾಡು, ಆಂಧ್ರ, ತೆಲಂಗಾಣ ನಮ್ಮ ರಾಜ್ಯದಿಂದ ನೂರಾರು ರೈತರು ಕಡಲೆಕಾಯಿ ಪರಿಷೆ ಭಾಗವಹಿಸಲಿದ್ದಾರೆ ಎಂದರು.

200 ಮಳಿಗೆಗಳಲ್ಲಿ ರೈತರು ಬೆಳೆದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಪ್ಲಾಸ್ಟಿಕ್ ಮುಕ್ತಕ್ಕೆ ಜನರ ಸಹಕಾರ ನೀಡಬೇಕು. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಿಸಲಾಗುವುದು ಸರಿಸುಮಾರು 8ಲಕ್ಷ ಜನರು ಪರಿಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

Leave a Reply