ಬೆಳಗಾವಿ: ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂ ಅನುದಾನ ಅದರಲ್ಲಿ 8.50 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆಯಾಗಿದೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮೇಲ್ಮನೆಗೆ ತಿಳಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಸ್ವಚ್ಚಭಾರತ ಮಿಷನ್ ನಡಿಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಚಭಾರತ ಅಭಿಯಾನ (ನ) 2.0 ರ ಯೋಜನೆಯ ಘನತ್ಯಾಜ್ಯ ವಸ್ತುನಿರ್ವಹಣೆ, ನೈರ್ಮಲ್ಯ ಉಪಘಟಕದಡಿ ವೈಯಕ್ತಿಕ, ಸಮುದಾಯ, ಸಾರ್ವಜನಿಕ ಮತ್ತು ಆಸ್ಪಿರೇಷನಲ್ ಶೌಚಾಲಯಗಳ ಕಾಮಗಾರಿಗಳು ಹಾಗೂ ಮಾಹಿತಿ ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ಧಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಚಿಕ್ಕನಾಯಕನಹಳ್ಳಿ ಪುರಸಭೆಯ ವ್ಯಾಪ್ತಿಯಲ್ಲಿ ಎಸ್ ಎಫ್‌ಸಿ. ಮುಕ್ತನಿಧಿ, ಎಸ್ಎಫ್ ಸಿ ವಿಶೇಷ ಅನುದಾನ ಯೋಜನೆಗಳಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಚಿಕ್ಕನಾಯಕನ ಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು,ಕಾಮಗಾರಿಯಲ್ಲಿ ವಿಳಂಬವಾಗಿಲ್ಲ ಎಂದರು.




