ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಖರಾಬು, ಸ್ಮಶಾನ, ಸರ್ಕಾರಿ ಓಣೆ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ ಭಕ್ತಿಪುರ ಗ್ರಾಮದ ಸ.ನಂ. 38 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.35 ಲಕ್ಷ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸ.ನಂ 141 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.65 ಲಕ್ಷ.
ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 173 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.50 ಕೋಟಿ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50 ಕೋಟಿ.
ಯಲಹಂಕ ತಾಲ್ಲೂಕಿನ ಯಲಹಂಕ ಹೋಬಳಿಯ ಶಿವನಹಳ್ಳಿ ಗ್ರಾಮದ ಸ.ನಂ 48 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.13 ಕೋಟಿ.
ಜಾಲ ಹೋಬಳಿಯ ಗಡೇನಹಳ್ಳಿ ಗ್ರಾಮದ ಸ.ನಂ 22ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು ಹಾಗೂ ವಿವಿ ತಾಲ್ಲೂಕಿನ ತಹಶೀಲ್ದಾರ್ ಹಾಜರಿದ್ದರು.




