ಮೈಸೂರು: ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ 10 ವರ್ಷದ ಸ್ಯಾಟಲೈಟ್ ಇಮೇಜ್ ಒದಗಿಸಲಾಗುವುದು. ಇದರ ಆಧಾರದಲ್ಲಿ ಸಾಗುವಳಿ ಬಗ್ಗೆ ಖಾತರಿ ಪಡಿಸಿಕೊಂಡು, ಬೋಗಸ್ ಅರ್ಜಿಗಳಿಗೆ ಅವಕಾಶ ನೀಡದಂತೆ ಅರ್ಹ ರೈತರಿಗೆ ಭೂ ಮಂಜೂರು ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.
ಅಲ್ಲದೆ, ಬಡ ರೈತರಿಗೆ ಶೇ.100 ನೆಮ್ಮದಿ ನೀಡಬೇಕು ಮುಂದಿನ ದಿನಗಳಲ್ಲಿ ಅವರ ದಾಖಲೆಗಳ ಬಗ್ಗೆ ಸಾಸಿವೆ ಕಾಳಿನಷ್ಟೂ ಅನುಮಾನ ಇರಬಾರದು, ಕೋರ್ಟ್ ಕಚೇರಿ ಸುತ್ತುವಂತೆ ಆಗಬಾರದು ಎಂಬುದು ನಮ್ಮ ಉದ್ದೇಶ. ಹೀಗಾಗಿ ಬಗರ್ ಹುಕುಂ ಜಮೀನನ್ನು ದುರಸ್ಥಿಗೊಳಿಸಿ ಹೊಸ ಹಿಸ್ಸಾ ನಂಬರ್ ಜೊತೆಗೆ ಸಾಗುವಳಿ ಚೀಟಿಯನ್ನು ಡಿಜಿಟಲೀಕರಣಗೊಳಿಸಿ ನೀಡಬೇಕು ಹಾಗೂ ಭೂಮಿಯನ್ನು ಕ್ರಮ (ರಿಜಿಸ್ಟರ್) ಮಾಡಿ ರೈತರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.




