ಐಪೋನ್ಗಳ ಹೊರ ಕವಚ ತಯಾರಿಸುವ ಘಟಕ ಸ್ಥಾಪಿಸಲು 8,800 ಕೋಟಿ ಹೂಡಿಕೆ: ಎಂ.ಬಿ ಪಾಟೀಲ್

3 years ago

#crore #investment #setup #unit #making #outer #casing #iPhones #MBPatil

ಬೆಂಗಳೂರು: ತೈವಾನ್ ಮೂಲದ ಫಾಕ್ಸ್ಕಾನ್ ಸಂಸ್ಥೆ ಕರ್ನಾಟಕದಲ್ಲಿ ಐಪೋನ್ಗಳ ಹೊರ ಕವಚ ತಯಾರಿಸುವ ಘಟಕ ಸ್ಥಾಪಿಸಲು ಸುಮಾರು 8,800 ಕೋಟಿ ರೂಪಾಯಿ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಫಾಕ್ಸ್ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿಇಒ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗದ ಜೊತೆ ಸಭೆ ನಡೆಸಿದ ಬಳಿಕ ಅವರು ಈ ವಿಷಯ ತಿಳಿಸಿದರು.

ತುಮಕೂರಿನ ಬಳಿ ಇರುವ ಜಪಾನೀಸ್ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯ 100 ಎಕರೆ ಭೂಮಿ ಇದ್ದು, ಉದ್ದಿಮೆ ಸ್ಥಾಪಿಸಲು ಒಳ್ಳೆಯ ವಾತಾವರಣ ಇದೆ. ಇದಕ್ಕೆ ರಾಜ್ಯ ಸರ್ಕಾರ ಕೂಡ ಪೂರ್ಣ ಸಹಕಾರ ನೀಡಲಿದೆ ಎಂದರು.

ಈ ಹೊಸ ಘಟಕದಿಂದ ಸುಮಾರು 14,000ಕ್ಕೂ ಹೆಚ್ಚು ಉದ್ಯೋಗಗಳು ದೊರೆಯಲಿವೆ. ಉದ್ಯಮ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.

Leave a Reply