ಮಂಗಳೂರು: ಇತ್ತೀಚಿಗೆ ಎಲ್ ಅಂಡ್ ಅಧ್ಯಕ್ಷರು ವಾರದಲ್ಲಿ 90 ಗಂಟೆಯ ಕೆಲಸ ಮಾಡಬೇಕೆಂದು ಹೊರಡಿಸಿರುವ ಫಾರ್ಮಾನು ಅವೈಜ್ಞಾನಿಕ, ಅಸಮರ್ಥನೀಯ ಹಾಗೂ ಅಮಾನವೀಯ ಎಂದು CITU ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಸೈಯ್ಯದ್ ಮುಜೀಬ್ ಅಸಮಾಧಾನ ವ್ಯಕ್ತಪಡಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ CITU ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ವಿಭಾಗ ಮಟ್ಟದ ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ನಿರುದ್ಯೋಗದಿಂದ ಬಳಲುತ್ತಿರುವ ದೇಶದಲ್ಲಿ ವಾರದಲ್ಲಿ 70 ಗಂಟೆ 90 ಗಂಟೆ ಕೆಲಸದ ಚರ್ಚೆಗಳು ಮತ್ತಷ್ಟು ನಿರುದ್ಯೋಗವನ್ನು ಹುಟ್ಟು ಹಾಕಲಿದೆ. ಮಾತ್ರವಲ್ಲದೆ ಅದು ಹಲವು ಸಾಮಾಜಿಕ ಸಮಸ್ಯೆಗಳನ್ನು ಹಾಗೂ ವಿವಿಧ ಆಯಾಮಗಳ ಸಮಸ್ಯೆಗಳನ್ನು ಉಲ್ಬಣಗೊಳಿಸಲಿದೆ. ಇದ್ಯಾವುದನ್ನು ಮುಂದಾಲೋಚಿಸದೆ ಕೇವಲ ತಮ್ಮ ಲಾಭಕಷ್ಟೇ ಸೀಮಿತವಾಗಿ ಬಂಡವಾಳಗಾರರು ಅಲೋಚಿಸುತ್ತಿರುವುದು ಸಮಾಜದ ಒಟ್ಟಾರೆ ಬೆಳವಣಿಗೆಗೆ ಪೂರಕವಲ್ಲ ಎಂದರು.
ಹತ್ತಾರು ಕಾನೂನುಗಳನ್ನು ಬದಲಾವಣೆ ಮಾಡುತ್ತಿರುವ ಕೇಂದ್ರ- ರಾಜ್ಯ ಸರ್ಕಾರಗಳು ಹೊಸ ಕಾಯ್ದೆಗಳ, ನಿಯಮಾವಳಿಗಳ ಹಾಗೂ ನೀತಿಗಳ ಮೂಲಕ ಜನರಿಗಿದ್ದ ಅಧಿಕಾರವನ್ನು ಕಸಿಯುತ್ತಿದ್ದು ಜನರನ್ನು ಮತ್ತೆ ಗುಲಾಮರನ್ನಾಗಿಸುತ್ತಿವೆ ಎಂದರು.
ಮಂಗಳೂರಿನಲ್ಲಿ ಜನರ ಧ್ವನಿಗಳಾದ ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸ್ ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯದ ರಾಜಧಾನಿಯಲ್ಲೂ ಪ್ರತಿಭಟನೆಗಳಿಗೆ ಅವಕಾಶವೇ ಇಲ್ಲದಂತಹ ವಾತಾವರಣ ನಿರ್ಮಾಣ ಮಾಡಿದೆ. ಇದು ಜನರ ಪ್ರತಿಭಟನೆಯ ಹಕ್ಕನ್ನು ಕಸಿಯುತ್ತಿರುವುದರ ಭಾಗವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜೆ ಬಾಲಕೃಷ್ಣ ಶೆಟ್ಟಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರ ಈಗಲೂ ಗ್ಯಾರಂಟಿ ಯೋಜನೆಗಳ ಅಮಲಿನಲ್ಲಿ ತೇಲಾಡುತ್ತಿದೆಯೇ ಹೊರತು ದುಡಿಯುವ ವರ್ಗದ ಪ್ರಶ್ನೆಗಳ ಬಗ್ಗೆ ಚಕಾರ ಶಬ್ದವೆತ್ತುತ್ತಿಲ್ಲ. ಮಾತ್ರವಲ್ಲದೆ ಕಳೆದ ಬಿಜೆಪಿ ಸರಕಾರ ಕೈಗೊಂಡ ಕಾರ್ಮಿಕ ವಿರೋಧಿ ನೀತಿಗಳನ್ನೇ ಮುಂದುವರಿಸುತ್ತಿದೆ. ಇಂತಹ ಸರಕಾರದ ವಿರುದ್ಧ ಧೃಢವಾದ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗವನ್ನು ಸಜ್ಜುಗೊಳಿಸಲು ನಡೆಯುವ ಈ ಕಾರ್ಯಾಗಾರ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕಾರ್ಮಿಕ ವರ್ಗದ ಹಕ್ಕುಗಳನ್ನು ರಕ್ಷಿಸಲು ದುಡಿಯುವ ವರ್ಗದ ಚಳುವಳಿಯನ್ನು ಬಲಿಷ್ಠಗೊಳಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ CITU ರಾಜ್ಯ ಉಪಾಧ್ಯಕ್ಷರುಗಳಾದ ವಸಂತ ಆಚಾರಿ, ಮಾಲಿನಿ ಮೇಸ್ತಾ, ರಾಧಾ ಮೂಡಬಿದ್ರೆ, ಧರ್ಮೇಶ್ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಹಾಸನ ವಿಭಾಗ ಮಟ್ಟದ ದ.ಕ., ಉಡುಪಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಆಯ್ದ 120ರಷ್ಟು ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಿದ್ದರು. ಈ ಶಿಬಿರದಲ್ಲಿ CITU ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ರಾಜ್ಯ ಉಪಾಧ್ಯಕ್ಷ ಡಾ.ಕೆ ಪ್ರಕಾಶ್, ಧರ್ಮೇಶ್, ಮಾಲಿನಿ ಮೇಸ್ತಾ ತರಗತಿಗಳನ್ನು ನಡೆಸಲಿದ್ದಾರೆ.




