ಬಳ್ಳಾರಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ 05 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ದಿನ(ಮಾ.03)ದಂದು ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿ ತಾಲ್ಲೂಕುಗಳಲ್ಲಿ ಬೂತ್ ದಿನದಂದು 197103 ಮಕ್ಕಳ ಪೈಕಿ 189229 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.96 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದ್ದಾರೆ.
ಉಳಿದ 7874 ಮಕ್ಕಳಿಗೆ ಮಾ.06 ರ ವರೆಗೆ ನಡೆಯುವ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.
ತಾಲ್ಲೂಕವಾರು ವಿವರ: ಬಳ್ಳಾರಿ ತಾಲ್ಲೂಕಿನಲ್ಲಿ 92495 ಮಕ್ಕಳ ಪೈಕಿ 88912 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಅದರಂತೆ ಕಂಪ್ಲಿ ತಾಲ್ಲೂಕಿನಲ್ಲಿ 15059 ಮಕ್ಕಳಲ್ಲಿ 14516 ಮಕ್ಕಳು, ಕುರುಗೋಡು ತಾಲ್ಲೂಕಿನಲ್ಲಿ 17831 ಮಕ್ಕಳ ಪೈಕಿ17266 ಮಕ್ಕಳು, ಸಂಡೂರು ತಾಲ್ಲೂಕಿನ 35392 ಮಕ್ಕಳಲ್ಲಿ 33721 ಮಕ್ಕಳು, ಸಿರುಗುಪ್ಪ ತಾಲ್ಲೂಕಿನಲ್ಲಿ 36326 ಮಕ್ಕಳಲ್ಲಿ 34814 ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಒಟ್ಟು 197103 ಮಕ್ಕಳ ಪೈಕಿ 189229 ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಮಕ್ಕಳಿಗೂ ಲಸಿಕೆ ಹಾಕುವ ದಿಶೆಯಲ್ಲಿ 333 ವಲಸೆ ಹಾಗೂ ಕ್ಲಿಷ್ಟಕರ ಪ್ರದೇಶಗಳನ್ನು ಗುರುತಿಸಲಾಗಿತ್ತು. ಅಂತಹ ಸ್ಥಳಗಳಲ್ಲಿ ಲಸಿಕೆ ಹಾಕಲು 174 ತಂಡಗಳನ್ನು ಸಿದ್ದಗೊಳಿಸಲಾಗಿತ್ತು. 968 ಬೂತ್ಗಳು 887 ಮನೆ ಭೇಟಿ ತಂಡಗಳು ಹಾಗೂ ಸಂತೆ, ಮಾರುಕಟ್ಟೆ, ಬಸ್ ನಿಲ್ದಾಣ, ಮತ್ತು ಇತರೆ ಜನ ಹೆಚ್ಚು ಸೇರುವ ಸ್ಥಳಗಳಲ್ಲಿ ಲಸಿಕೆ ಹಾಕಲು 51 ತಂಡಗಳು ಮತ್ತು ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳ, ಕುರಿಹಟ್ಟಿ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 17 ಸಂಚಾರಿ ತಂಡಗಳ ಮೂಲಕ ಸಾಧನೆ ಮಾಡಲಾಗಿದೆ.
ತಂಡಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ನಸಿರ್ಂಗ್ ಕಾಲೇಜ್ ಹಾಗೂ ಸ್ವಯಂ ಸೇವಕರು ಪೋಲಿಯೋ ವ್ಯಾಕ್ಸಿನೇಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ 185 ಮೇಲ್ವಿಚಾರಕರು ಹಾಗೂ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಯವರು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತದ ಸಂಪೂರ್ಣ ಬೆಂಬಲದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಮತ್ತು ಬೆಂಬಲದೊಂದಿಗೆ ಈ ಗುರಿಯನ್ನು ಸಾಧಿಸಲಾಗಿದೆ. ಇದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.




