BSPಯ 53 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

3 years ago

ಬೆಂಗಳೂರು: ಮುಂಬರುವ ವಿಧಾನಸಬಾ ಚುನಾವಣೆಗೆ ಬಹುಜನ ಸಮಾಜವಾದಿ ಪಾರ್ಟಿ ಭರ್ಜರಿ ಸಿದ್ದತೆ ನಡೆಸಿದ್ದು, ಪ್ರಸ್ತುತ 53 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‍ಪಿ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ, ಮುಂದಿನ ಕರ್ನಾಟಕ ಚುನಾವಣೆಯಲ್ಲಿ ಬಿಎಸ್‍ಪಿ ಪ್ರಮುಖ ಪಾತ್ರ ವಹಿಸಲಿದ್ದು, ಹಲವಾರು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಎಸ್‍ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಯವತಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಉಸ್ತುವಾರಿ ಮಾಜಿ ಸಂಸದ ಡಾ.ಅಶೋಕ್ ಸಿದ್ದಾರ್ಥ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ, ನಿತಿನ್ ಸಿಂಗ್, ದಿನೇಶ್ ಗೌತಮ್, ಎಂ.ಗೋಪಿನಾಥ್ ಮತ್ತು ನಾನು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲಾಗಿದೆ ಎಂದು ತಿಳಿಸಿದರು
ಸ್ವತಃ ನಾನು ಮಳವಳ್ಳಿ ಕ್ಷೇತ್ರದಿಂದ ಸ್ರ್ಪಸುತ್ತಿರುವುದಾಗಿ ತಿಳಿಸಿದ ಅವರು, ಉಳಿದಂತೆ ಗುರುಮಿಟ್ಕಲ್‍ನಿಂದ ಕೆ.ಬಿ.ವಾಸು, ಮಧುಗಿರಿಯಿಂದ ಎನ್.ಮಧು, ತಿಪಟೂರಿನಿಂದ ಅಶ್ವಥ್ ನಾರಾಯಣ, ಚಾಮರಾಜನಗರದಿಂದ ಹ.ರಾ.ಮಹೇಶ್, ಬೇಲೂರಿನಿಂದ ಗಂಗಾಧರ್ ಬಹುಜನ್, ಆನೇಕಲ್‍ನಿಂದ ಚಿನ್ನಪ್ಪ ಚಿಕ್ಕಹಾಗಡೆ, ಯಲಹಂಕದಿಂದ ಸಂದೀಪ್ ಮಾರಸಂದ್ರ ಮುನಿಯಪ್ಪ ಸ್ಪರ್ಧಿಸುವ ಪ್ರಮುಖರು ಎಂದರು.

Leave a Reply