ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

3 years ago

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ.ಉಮೇಶ್ ಶೆಟ್ಟಿಯ ತೆರೆದ ವಾಹನದಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಗರಭಾವಿ ಪಾಲಿಕೆ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ರಾಜ್ಯ ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ, ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥ ಗೌಡ ಮುಂತಾದವರು ಉಪಸ್ಥಿತರಿದ್ದರು.

ಕೆ.ಉಮೇಶ್ ಶೆಟ್ಟಿಯವರದು ಉಡುಪಿ ಜಿಲ್ಲೆ ಕುತ್ಪಾಡಿ ಗ್ರಾಮದಲ್ಲಿ ರೈತಾಪಿ ಕುಟುಂಬ.

ಸಚಿವ ವಿ.ಸೋಮಣ್ಣರವರ ಕಳೆದ 20ವರ್ಷಗಳಿಂದ ನಿಕಟ ಸಂಪರ್ಕ.

ಪಕ್ಷ ಗುರುತಿಸಿ 2010ಮತ್ತು 2015ರಲ್ಲಿ ನಾಗರಭಾವಿ ವಾರ್ಡ್ ಮತ್ತು ಗೋವಿಂದರಾಜನಗರ ವಾರ್ಡ್ ಎರಡು ಬಾರಿ ಸದಸ್ಯರಾಗಿ ಸೇವೆ.

ಬೃಹತ್ ಬೆಂಗಳೂರು ಹೋಟೆಲು ಅಸೋಸಿಯೋಸನ್ ಅಧ್ಯಕ್ಷರಾಗಿ ಸೇವೆ, ಬಿಬಿಎಂಪಿ ಹೋಟೆಲ್ ಅಸೋಸಿಯೇಷನ್ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ.

ಬೆಂಗಳೂರುನಗರ ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ, ಇದೀಗ ಪಕ್ಷ ಗುರುತಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ.

ಮಹಾನಗರ ಪಾಲಿಕೆ ಮಾಜಿ ಸದಸ್ಯರುಗಳಾದ ಮೋಹನ್ ಕುಮಾರ್, ದಾಸೇಗೌಡ, ರಾಜೇಶ್ವರಿ, ಜಯರತ್ನ, ರಾಮಪ್ಪ ಹಾಗೂ ಗೋವಿಂದರಾಜನಗರ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply