ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎಸ್.ಎನ್.ಬೋಸರಾಜ್ ಹಾಗು ತಿಪ್ಪಣ್ಣಪ್ಪ ಕಮಕನೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ನಲ್ಲಿ ಖಾಲಿ ಇದ್ದ 3 ಸದಸ್ಯ ಸ್ಥಾನಗಳಿಗೆ ಪ್ರತ್ಯೇಕ ಹೊರಡಿಸಲಾಗಿತ್ತು. 3 ಸದಸ್ಯ ಸ್ಥಾನದ ಚುನಾವಣೆಗೂ ತಲಾ ಒಬ್ಬರೇ ಅಭ್ಯರ್ಥಿಗಳು ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2028ರ ಜೂ.14ರವರೆಗೆ ಅವಯಿರುವ ವಿಧಾನಪರಿಷತ್ನ ಸದಸ್ಯ ಸ್ಥಾನಕ್ಕೆ ಸ್ರ್ಪಧಿಸಿದ್ದ ಜಗದೀಶ್ ಶೆಟ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



