ಮೂವರು ಡ್ರಗ್ಸ್ ಪೆಡ್ಲರ್ ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿ

3 years ago

ಬೆಂಗಳೂರು: ಮಹಾರಾಷ್ಟ್ರದ ಗಡಿಭಾಗದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ಬಸ್ಸಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 13 ಕೆ ಜಿ ಗಾಂಜಾ, 1 ಕೆ.ಜಿ. ಗಾಂಜಾ ಎಣ್ಣೆ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಎರಡು 2 ಕಾರುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ಕಳೆದ ಜೂ. 21 ರಂದು ನಂದಿನಿ ಲೇಔಟ್ ನ ಬಿ.ಹೆಚ್.ಇ.ಎಲ್ ಪಾರ್ಕ್ ಬಳಿ ಬಂಧಿತ ಆರೋಪಿಗಳು ಎರಡು ಕಾರುಗಳಲ್ಲಿ, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಬಂದಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ ನಡೆಸಿದ ವಿಚಾರಣೆಯಲ್ಲಿ ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳು ವಿಚಾರಣೆ ವೇಳೆ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಪ್ರದೇಶದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ಬಸ್ಸಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದಾಗಿ ಬಾಯ್ಬಿಟ್ಟಿದ್ದಾರೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

Leave a Reply