‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ: ಅಶ್ವತ್ಥನಾರಾಯಣ
ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ `ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡೀಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಕ್ಷಣ ಅವುಗಳ ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಅದನ್ನು ಜರಿಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 4ರಂದು ಹೋರಾಟ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸದನದ ಹೊರಗೆ ಪಕ್ಷದ ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ ಎಂದರು.
ಭರವಸೆ ನೀಡಿದ 10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ ಎಂದು ಟೀಕಿಸಿದರು. ಮಾತಿನಂತೆ 10 ಕೆಜಿ ಅಕ್ಕಿ ಕೊಡಿ ಎಂದು ಆಗ್ರಹಿಸಿದರು.
ಸದನದ ಹೊರಗೆ ಪಕ್ಷದ ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ ಎಂದರು. 10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ ಎಂದು ಟೀಕಿಸಿದರು.
200 ಯೂನಿಟ್ ಉಚಿತ ವಿದ್ಯುತ್ ಎಂದಿದ್ದರು. ಈಗ 200 ಯೂನಿಟ್ ಮಾಯವಾಗಿ 10 ತಿಂಗಳ ಸರಾಸರಿ ಮಾಡಿ ಹೆಚ್ಚುವರಿ ಶೇ 10 ಕರೆಂಟ್ ಕೊಡುವ ಮಾತನಾಡುತ್ತಿದ್ದಾರೆ. ಕಂಡೀಷನ್ ಇಲ್ಲದೆ 200 ಯೂನಿಟ್ ವಿದ್ಯುತ್ ಕೊಡುವಂತೆ ಒತ್ತಾಯಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಪ್ರಿಯಾಂಕಾ ಗಾಂಧಿ ಅವರೇ ಘೋಷಿಸಿದ್ದರು. ಈಗ ಮನೆಯೊಡತಿಗೆ ಮಾತ್ರ ಎನ್ನುವ ಮೂಲಕ ಮನೆಯಲ್ಲಿ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮಹಿಳೆಗೂ ಹಣ ಕೊಡಿ ಎಂದು ಒತ್ತಾಯಿಸಿದರು.




