ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಿ ನೆಮ್ಮದಿ ವಾತಾವರಣ ಕಲ್ಪಿಸಲು ಸರ್ಕಾರ ಸಮರ್ಥ: ಸಿದ್ದರಾಮಯ್ಯ

3 years ago

#Govt #capable #suppressing #criminal #activities #creating #peaceful #environment #Siddaramaiah

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕುವ ಮೂಲಕ ನೆಮ್ಮದಿಯ ವಾತಾವರಣ ಕಲ್ಪಿಸಲು ನಮ್ಮ ಸರ್ಕಾರ ಸಮರ್ಥವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದಿದ್ದಾರೆ.

ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ.ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದು ಹೇಳಿದ್ದಾರೆ.

ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply