ಬೆಲೆ ಏರಿಕೆ ವಿರುದ್ದ ಬೃಹತ್ ಸೈಕಲ್ ಜಾಥ ಮೂಲಕ ಪ್ರತಿಭಟನೆ

5 years ago

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಬಿ.ಜೆ.ಪಿ., ಕೇಂದ್ರ ಸರ್ಕಾರದ ವಿರುದ್ಧ ಜನಾಭಿಪ್ರಾಯ ಯತ್ನ

ಬೆಂಗಳೂರು: ಕೇಂದ್ರ ಸರ್ಕಾರ ಸತತವಾಗಿ ಪೆಟ್ರೋಲ್, ಡೀಸಲ್ ಮತ್ತು ಅಡುಗೆ ಆನಿಲ ಬೆಲೆ ಹೆಚ್ಚಳ ಮಾಡಿರುವುದರಿಂದ ಆಹಾರ ಪದಾರ್ಥಗಳ ಬೆಲೆ ಸಹ ಏರಿಕೆಯಾಗಿದೆ ಎಂದು ಮಾಜಿ ಮೇಯರ್ ಪದ್ಮಾವತಿ ಹೇಳಿದರು.

ಪೆಟ್ರೋಲ್, ಡೀಸಲ್ ಮತ್ತು ದಿನಬಳಕೆ ಆಹಾರ ಪದಾರ್ಥಗಳ ಬೆಲೆ ಏರಿಕೆ ವಿರುದ್ದ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೈಕಲ್ ಜಾಥಾ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ಮಾತಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೊರೋನ ಕಾರಣದಿಂದ ಉದ್ಯೋಗವಿಲ್ಲ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡುವುದರಿಂದ ಜೀವನ ಸಾಗಿಸುವುದು ಕಷ್ಟ. ಒಳ್ಳೆಯ ದಿನ (ಅಚ್ಚೆ ದೀನ್) ಅಂದರೆ ಇದೇನಾ? ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರಗಳು ಜನವಿರೋಧಿ ಎಂದರು.

ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಮೋಹನ್ ಕುಮಾರ್, ವಿಜಯಕುಮಾರ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೆಂಕಟೇಶ್, ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಾಜಾಜಿನಗರ, ಶ್ರೀರಾಮ ಮಂದಿರ, ಶಿವನಗರ ಮತ್ತು ಕಾಮಾಕ್ಷಿಪಾಳ್ಯ ಪ್ರಮುಖ ರಸ್ತೆಗಳ ಮೂಲಕ ಸೈಕಲ್ ಮೂಲಕ ಯಾತ್ರೆ ನಡೆಸಿದರು.

Leave a Reply