ಸೆಪ್ಟಂಬರ್ ಹೊತ್ತಿಗೆ ಎಲ್ಲರಿಗೂ ಕೋವಿಡ್ ಲಸಿಕೆ: ಸುರೇಶ್ ಕುಮಾರ್

5 years ago

ಬೆಂಗಳೂರು: ಕೊರೊನ ವೈರಸ್ ಬರದಂತೆ ತಡೆಗಟ್ಟಲು ಕೋವಿಡ್-19 ಲಸಿಕೆಯನ್ನು ಪ್ರತಿಯೊಬ್ಬರು ಹಾಕಿಸಿಕೊಳ್ಳಬೇಕು. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೆಪ್ಟಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ಹಾಕಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ರಾಜಾಜಿನಗರ ವಿಧಾನಸಭಾ, ಶ್ರೀರಾಮ ಮಂದಿರ ಆಟದ ಮೈದಾನದಲ್ಲಿ ಕೂಲಿ ಕಾರ್ಮಿಕರು ಮತ್ತು ಮನೆ ಕೆಲಸದವರು, ದೇವಸ್ಥಾನ ಸಿಬ್ಬಂದಿ, ವಿಕಲಚೇತನರಿಗೆ ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿ ಮಾತಾಡಿದ ಅವರು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಜನರ ಸಹಕಾರದಿಂದ ಕೊರೊನ ವೈರಸ್ ಹರಡದಂತೆ ತಡೆಯಬಹುದು ಎಂದರು.

ಮಕ್ಕಳಿಗೆ ಕೋವಿಡ್ ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇನ್ನು ಮೂರು ತಿಂಗಳ ಅವಧಿಯಲ್ಲಿ ಮಕ್ಕಳಿಗೆ ಕೋವಿಡ್-19 ಲಸಿಕೆ ಬರುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಸಚಿವ ಸುಧಾಕರ್ ಹೇಳಿದ್ದಾರೆ. ಕೋವಿಡ್ ನಿಯಮಾವಳಿ ಪಾಲಿಸುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಬಿ.ಬಿ.ಎಂ.ಪಿ.ಯ ಮಾಜಿ ಸದಸ್ಯೆ ದೀಪಾ ನಾಗೇಶ್ ಮತ್ತು ಮಂಡಲ ಅಧ್ಯಕ್ಷ ರಾಘವೇಂದ್ರರಾವ್, ಮಂಡಲದ ಉಪಾಧ್ಯಕ್ಷ ಬಿ.ಎನ್.ಶ್ರೀನಿವಾಸ್, ಬಿ.ಜೆ.ಪಿ.ಮುಖಂಡರಾದ ನಾಗೇಶ್, ವೆಂಕಟೇಶ್ ಬಾಬು, ಮೋಹನ್ ರಾಜ್, ಕಿರಣ್ ಮೊದಲಾದವರು ಭಾಗವಹಿಸಿದ್ದರು.

Leave a Reply