ಬೆಂಗಳೂರು: ರಾಜ್ಯದ ಕಟ್ಟಡ ನಿರ್ಮಾಣ ವಲಯದಲ್ಲಿ ಕೆಲಸ ಮಾಡುವ ಸಾವಿರಾರು ಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇದೇ ಆಗಸ್ಟ್ 24 ರಂದು ರಾಜ್ಯದ ಬೆಂಗಳೂರು ಸೇರಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆಗಳನ್ನು ಯಶಸ್ವಿಗೊಳಿಸಿದ್ದಾರೆ ಅವರುಗಳಿಗೆ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) ರಾಜ್ಯ ಸಮಿತಿ(ಸಿಐಟಿಯು) ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸಿದೆ.
ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ಕಾರ್ಮಿಕ ಸಂಹಿತೆಗಳ ಮೂಲಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಮತ್ತು ಸೇವಾಷರತ್ತುಗಳು) ಕಾಯ್ದೆ – 1996 ಮತ್ತು ಸೆಸ್ ಕಾಯ್ದೆ – 1996 ಕಾಯ್ದೆ ಗಳನ್ನು ವಿಲೀನಗೊಳಿಸಿದೆ ಇದರಿಂದಾಗಿ ಭವಿಷ್ಯದಲ್ಲಿ ಕಲ್ಯಾಣ ಮಂಡಳಿ ಹಾಗೂ ಅವುಗಳಲ್ಲಿ ಇರುವ ಸೆಸ್ ನಿಧಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ), ರಾಜ್ಯ ಸಮಿತಿ(ಸಿಐಟಿಯು) ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಬಾಕಿ ಇರುವ ಶೈಕ್ಷಣಿಕ ಧನ ಸಹಾಯ ಸೇರಿ ಎಲ್ಲಅರ್ಜಿಗಳನ್ನು ಇತ್ಯರ್ಥಪಡಿಸಬೇಕು ಎಲ್ಲಾ ಕಟ್ಟಡ ಕಾರ್ಮಿಕರಿಗೆ ತಿಂಗಳು ಕನಿಷ್ಠ ವೇತನ 32000 ರೂ. ಮತ್ತು ಪಿಂಚಣಿ 10000 ರೂ. ಖಾತ್ರಿಪಡಿಸಬೇಕು. ನಿರ್ಮಾಣ ಸಾಮಗ್ರಿಗಳು ಮತ್ತು ಸಲಕರಣೆಗಳ ಬೆಲೆಗಳನ್ನು ನಿಯಂತ್ರಣ ಮಾಡಬೇಕು, ಸೆಸ್ ಸರಿಯಾದ ಸಂಗಹಕ್ಕೆ ಕ್ರಮವಹಿಸಿ ಸೆಸ್ ವಂಚನೆ ತಡೆಗಟ್ಟಿ ಮತ್ತು ಸೆಸ್ ದುರ್ಬಳಕೆ ನಿಲ್ಲಿಸಿ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸಬೇಕು ಹಾಗೂ ದೇಶದ ಎಲ್ಲಾ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಗಳಲ್ಲಿ ಸಿಐಟಿಯು ಸೇರಿ ಹಾಗೂ ಕೇಂದ್ರ ಕಾರ್ಮಿಕ ಸಂಘಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು, BOCW ಕಾಯಿದೆ ಅಡಿಯಲ್ಲಿ ನಿರ್ಮಾಣೇತರ ಕಾರ್ಮಿಕರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಮತ್ತು ನಕಲಿ ಕಾರ್ಡುಗಳ ಹಾವಳಿ ತಡೆಗಟ್ಟಬೇಕು ಎನ್ನುವ ಇನ್ನೂ ಹಲವು ಬೇಡಿಕೆಗಳಿಗಾಗಿ ಆಗಸ್ಟ್ 17 ರಿಂದ 23 ರವರೆಗೆ ಪ್ರಚಾರಾಂದೋಲನ ನಡೆಸಿ ಆಗಸ್ಟ್ 24 ರಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆಗಳಿಗೆ ಸಿಐಟಿಯು ಸಂಯೋಜಿತ ಕನ್ಸ್ಟ್ರಕ್ಷನ್ ವರ್ಕರ್ಸ್ ಫೆಡರೇಷನ್ ಆಫ್ ಇಂಡಿಯಾ ( CWFI ) ಕರೆ ನೀಡಿತ್ತು.
ಅದರಂತೆ ರಾಜ್ಯದ 23 ಜಿಲ್ಲೆಗಳ 260 ಅಧಿಕ ಕೇಂದ್ರಗಳಲ್ಲಿ ಮತ್ತು 75 ಕ್ಕೂ ಅಧಿಕ ತಾಲೂಕ ವಲಯಗಳಲ್ಲಿ ಪೊಸ್ಟರ್ ಪ್ರದರ್ಶನ, ಕರಪತ್ರ ಹಂಚಿಕೆ ಬೀದಿಬದಿ,ವಾರ್ಡವಾರು ಪ್ರಚಾರ ಸಭೆಗಳನ್ನು ನಡೆಸಿ 50 ಸಾವಿರಕ್ಕೂ ಹೆಚ್ಚಿನ ಕಾರ್ಮಿಕರಿಗೆ ಜಾಗೃತಿ ಮೂಡಿಸಿ ಪ್ರಚಾರಾಂದೋಲನ ಯಶಸ್ವಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಆಗಸ್ಟ್ 24 ರಂದು ಜಿಲ್ಲಾಧಿಕಾರಿ ಹಾಗೂ ಕಾರ್ಮಿಕಾಧಿಕಾರಿಗಳ ಕಚೇರಿಗಳ ಮುಂಭಾಗದಲ್ಲಿ ಬೃಹತ್ ಮತಪ್ರದರ್ಶನ ನಡೆಸಿ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಮಂಗಳೂರಿನಲ್ಲಿ ನಿರ್ಮಾಣ ವಲಯದ ಸಾವಿರಾರು ಕಾರ್ಮಿಕರು ಮೂರು ದಿನಗಳ ಚಳವಳಿಯನ್ನು ಅಲ್ಲಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಮುಂದೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಹೋರಾಟದ ಭಾಗವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು ಇದರಲ್ಲಿ CITU, AIUTUC, INTUC, NCL, HMS, AICCTU,AIUTUC ಹಾಗೂTUCC ಸಂಯೋಜಿತ ಕಟ್ಟಡ ಕಾರ್ಮಿಕ ಸಂಘಗಳ ಸಾವಿರಾರು ಕಟ್ಟಡಕಾರ್ಮಿಕರು, ನಾಯಕರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಈ ಪ್ರತಿಭಟನಾ ಸ್ಥಳಕ್ಕೆ ಕಲ್ಯಾಣ ಮಂಡಳಿ ಕಾರ್ಯನಿರ್ವಾಹಣಾಧಿಕಾರಿ ಡಾ. ಭಾರತಿ ಅವರು ಆಗಮಿಸಿ ಮನವಿ ಸ್ವೀಕರಿಸಿದ್ದಾರೆ ಮತ್ತು ಆಗಸ್ಟ್21 ರಂದು ಸಮನ್ವಯ ಸಮಿತಿ ಮುಖಂಡರ ಜತೆ ಬೇಡಿಕೆಗಳ ಕುರಿತು ಸುದೀರ್ಘವಾದ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಸಮನ್ವಯ ಸಮಿತಿ ಹಾಗೂ CWFI ಸಂಘಟಿಸಿದ್ದ ಈ ಚಳವಳಿ ಮೂಲಕ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಇತ್ಯರ್ಥಪಡಿಸಲು ಆಗ್ರಹಪಡಿಸಲಾಗಿದೆ. ಮತ್ತು ಈ ಹೋರಾಟದ ಮುಂದುವರಿಕೆಯಾಗಿ ಸೆಪ್ಟೆಂಬರ್10 ರೊಳಗೆ ಉಸ್ತುವಾರಿ ಸಚಿವರುಗಳ ಮೂಲಕ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಆ ಬಳಿಕವೂ ಸಮಸ್ಯೆಗಳು ಬಗೆಹರಿಯದಿದ್ದರೆ ಮತ್ತೊಂದು ಹಂತ ತೀವ್ರತರವಾದ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.




