ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ: ಕೆ.ಎಸ್.ಈಶ್ವರಪ್ಪ

3 years ago

#breaking #OperationKamala #start #again #topple #Congress #government #KSEshwarappa

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷಾಂತರ ಚಟುವಟಿಕೆಗಳು ಆರಂಭವಾಗಲಿವೆ. ಬಿಜೆಪಿ ಮತ್ತು ಜೆಡಿಎಸ್ ನ ಕೆಲವು ಶಾಸಕರು ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ನಿಮಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ಯಿರಿ ನೋಡೋಣ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್ ನಿಂದಲೇ ಹಲವರು ಬಿಜೆಪಿ ಸೇರುತ್ತಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಹೇಳಿದರು.


ಕಾಂಗ್ರೆಸ್ ನವರ ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ. ಕಾಂಗ್ರೆಸ್ಗೆ ಬಿಜೆಪಿಯಿಂದ ಅಷ್ಟು ಜನ ಬರುತ್ತಾರೆ, ಇಷ್ಟು ಜನ ಬರುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ತಿಹಾರ್ ಜೈಲಿನಲ್ಲಿ ಇದ್ದು ಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗ ಪ್ರಜ್ವಲ್ ರೇವಣ್ಣ ಅನರ್ಹತೆಯ ವಿಚಾರ ಮುಂದಿಟ್ಟುಕೊಂಡು, ಆಸ್ತಿ ವಿಚಾರಗಳನ್ನು ಜನಪ್ರತಿನಿಧಿಗಳು ಮುಚ್ಚಿಡಬಾರದು ಎಂದು ಬುದ್ಧಿ ಹೇಳುತ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಲೇವಡಿ ಮಾಡಿದರು.

Leave a Reply